Jun 14, 2022, 12:13 PM IST
ಬೆಂಗಳೂರು, (ಜೂನ್.14): ಕರ್ನಾಟಕದಲ್ಲಿ (Karnataka) ನಡೆದಿರುವ ಪಿಎಸ್ಐ ಪರೀಕ್ಷೆ ಹಗರಣ (PSI Exam Scam) ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಪಿಎಸ್ಐ ಪರೀಕ್ಷೆ ಹೆಸರಲ್ಲಿ ಕೋಟಿ ಕೋಟಿ ರೂಪಾಯಿಗಳ (Crore Rupees) ಹಗರಣ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಎಸ್‌ಐ ಪರೀಕ್ಷೆಯಲ್ಲಿ ಲಂಚ ನೀಡಿದ ಅಭ್ಯರ್ಥಿಯಿಂದಲೇ ತನಿಖೆಗೆ ಅರ್ಜಿ!
ಈ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಹಲವರನ್ನು ಬಂಧಿಸಿದ್ದು, ವಿಚಾರಣೆ ಮುಂದುವರೆಸಿದೆ. ಇನ್ನು ಈ ಪ್ರಕರಣದಲ್ಲಿ ಹಲವು ಪೊಲೀಸ್ ಅಧಿಕಾರಿಗಳು ಶಾಮೀಲಾಗಿದ್ದು, ಅವರ ವಿಚಾರಣೆ ಸಹ ನಡೆಯುತ್ತಿದೆ. ಅಧಿಕಾರಿಗಳು ಮಾತ್ರವಲ್ಲದೇ ಈ ಪ್ರಕರಣದಲ್ಲಿ ರಾಜಕೀಯ ನಾಯಕರ ಕೈವಾಡ ಇರುವ ಅನುಮಾನಗಳು ವ್ಯಕ್ತವಾಗುತ್ತಿವೆ. ಪ್ರಭಾವಿ ರಾಜಕಾರಣಿಗಳ ಕೈವಾಡ ಇದ್ದು, ಇದೀಗ ಅವರಗೆ ತಳಮಳ ಶುರುವಾಗಿದೆ.