vuukle one pixel image

ಡಿ. ಕೆ. ರವಿ ಪತ್ನಿ ಕುಸುಮಾ ಕಾಂಗ್ರೆಸ್‌ಗೆ ಸೇರ್ಪಡೆ!

Suvarna News  | Published: Oct 4, 2020, 3:12 PM IST

ಬೆಂಗಳೂರು(ಅ.04) ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಹೀಗಿರುವಾಗಲೇ ಡಿ. ಕೆ. ರವಿ ಪತ್ನಿ ಕುಸುಮಾ ಭಾನುವಾರ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಡಿಕೆಶಿ, ಸಿದ್ದರಾಮಯ್ಯ, ಜಿ. ಪರಮೇಶ್ವರ್ ಸಮ್ಮುಖದಲ್ಲೇ ಕುಸುಮಾರವರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ. ಇದೇ ವೇಳೆ ಅವರ ತಂದೆ ಹನುಮಂತ ರಾಯಪ್ಪ ಕೂಡಾ ಪಕ್ಷಕ್ಕೆ ಸೇರಿದ್ದಾರೆ. ಜೊತೆಗೆ ಶಿತರಾ ಕ್ಷೇತ್ರದ 60 ಕಾರ್ಯಕರ್ತರೂ ಪಕ್ಷ ಸೇರ್ಪಡೆಗೊಂಡಿದ್ದಾರೆ.