News Hour: ವರ್ಗಾವಣೆ ದಂಧೆಗೆ ಎಚ್‌ಡಿಕೆ ಪೆನ್‌ಡ್ರೈವ್‌ ಸಾಕ್ಷ್ಯ, ಸಿದ್ದು ಸರ್ಕಾರಕ್ಕೆ ಸವಾಲಾದ 'ದಳಪತಿ'

News Hour: ವರ್ಗಾವಣೆ ದಂಧೆಗೆ ಎಚ್‌ಡಿಕೆ ಪೆನ್‌ಡ್ರೈವ್‌ ಸಾಕ್ಷ್ಯ, ಸಿದ್ದು ಸರ್ಕಾರಕ್ಕೆ ಸವಾಲಾದ 'ದಳಪತಿ'

Published : Jul 05, 2023, 11:32 PM IST

ಸರ್ಕಾರದ ವಿರುದ್ಧ ದಿನಕ್ಕೊಂದು ಸಿಡಿಗುಂಡು ಎಸೆಯುತ್ತಿರುವ ಮಾಜಿ ಮುಖ್ಯಮಂತ್ರಿ ಜೆಡಿಎಸ್‌ ನಾಯಕ ಎಚ್‌ಡಿ ಕುಮಾರಸ್ವಾಮಿ, ಬುಧವಾರ ಸದನಕ್ಕೆ ಪೆನ್‌ಡ್ರೈವ್‌ ಸಾಕ್ಷ್ಯದೊಂದಿಗೆ ಬಂದರು. ಆ ಮೂಲಕ ದಾಖಲೆ ಕೊಡಿ ಎಂದು ಸವಾಲ್‌ ಹಾಕುತ್ತಿದ್ದ ಕಾಂಗ್ರೆಸ್‌ಗೆ ತಿರುಗೇಟು ನೀಡಿದ್ದಾರೆ.

ಬೆಂಗಳೂರು (ಜು.5): ಕಾಂಗ್ರೆಸ್‌ ಸರ್ಕಾರದ ವಿರುದ್ಧ ದಿನಕ್ಕೊಂದರಂತೆ ಭ್ರಷ್ಟಾಚಾರದ ಆರೋಪ ಮಾಡಿರುವ ಜೆಡಿಎಸ್‌ ನಾಯಕ ಎಚ್‌ಡಿ ಕುಮಾರಸ್ವಾಮಿ, ಬುಧವಾರ ಪೆನ್‌ಡ್ರೈವ್‌ ಸಾಕ್ಷ್ಯದೊಂದಿಗೆ ಸದನಕ್ಕೆ ಆಗಮಿಸಿದರು. ಅದರೊಂದಿಗೆ ಹೊಸ ಸರ್ಕಾರದಲ್ಲಿ ವರ್ಗಾವಣೆಗೆ 10 ಕೋಟಿ ಫಿಕ್ಸ್ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ವರ್ಗಾವಣೆ ದಂಧೆ ಹೆಸರಿನಲ್ಲಿ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ವಾಕ್ಸಮರ್ ಜೋರಾಗಿದೆ. ಏಕಾಂಗಿಯಾಗಿ ಸರ್ಕಾರದ ಮೇಲೆ ಮುಗಿಬಿದ್ದಿರುವ ಕುಮಾರಸ್ವಾಮಿ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. 30 ಲಕ್ಷದ ಆರೋಪದ ಬಳಿಕ ಈಗ 10 ಕೋಟಿಯ ಬಾಂಬ್‌ ಹಾಕಿದ್ದಾರೆ.

Transfer Mafia: ಕಾಂಗ್ರೆಸ್ ವಿರುದ್ಧ ಪೆನ್‌ಡೈವ್‌ ದಾಖಲೆ ತೋರಿಸಿದ ಕುಮಾರಸ್ವಾಮಿ!

ಇನ್ನೊಂದೆಡೆ, ಕೇಸರಿ ಪಾಳಯದಲ್ಲಿ ವಿಪಕ್ಷ ನಾಯಕನ ಆಯ್ಕೆಯೇ ದೊಡ್ಡ ಸವಾಲಾಗಿ ಪರಿಣಮಿಸಿದೆ. ಸತತ ಮೂರನೇ ದಿನವೂ ವಿಪಕ್ಷ ನಾಯಕನಿಲ್ಲದೆ ಸದನ ನಡೆಯಿತು. ವಿಪಕ್ಷ ನಾಯಕನ ಬಗ್ಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿಯೇ ಮುತುವರ್ಜಿ ತೋರಿದ್ದಾರೆ ಎನ್ನಲಾಗಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more