Jul 19, 2021, 8:46 PM IST
ಬೆಂಗಳೂರು(ಜು. 19) ವೈರಲ್ ಆಗಿದೆ ಎನ್ನುವ ಆಡಿಯೋ ವನ್ನು ತನಿಖೆಗೆ ಒಳಪಡಿಸಬೇಕು ಎಂದು ಸಚಿವ ಕೆಎಸ್ ಈಶ್ವರಪ್ಪ ಆಗ್ರಹಿಸಿದ್ದಾರೆ. ಎಲ್ಲಿಯವರೆಗೆ ಸ್ಥಾನ ಮಾನ ಸಿಗುತ್ತದೆಯೋ ಅಲ್ಲಿಯವರೆಗೂ ಪಕ್ಷದಲ್ಲಿ ಇರುತ್ತೇನೆ.. ಪಕ್ಷದ ನಿರ್ಧಾರಕ್ಕೆ ನಾನು ಬದ್ಧ ಎಂದು ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾತನಾಡಿದ್ದಾರೆ ಎನ್ನುವ ಆಡಿಯೋ ದೊಡ್ಡ ಸಂಚಲನ ಸೃಷ್ಟಿಸಿದೆ. ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಚರ್ಚೆಗೆ ನಾಂದಿ ಹಾಡಿದೆ.