ರಾಹುಲ್‌ ಗಾಂಧಿ ಅಂಗಳ ತಲುಪಿದ ಕೋಲಾರ ಟಿಕೆಟ್‌ ಲಾಬಿ: ಸಿದ್ದು ವಿರುದ್ಧ ಬಂಡಾಯ

ರಾಹುಲ್‌ ಗಾಂಧಿ ಅಂಗಳ ತಲುಪಿದ ಕೋಲಾರ ಟಿಕೆಟ್‌ ಲಾಬಿ: ಸಿದ್ದು ವಿರುದ್ಧ ಬಂಡಾಯ

Published : Apr 06, 2023, 06:41 PM IST

ಕಾಂಗ್ರೆಸ್‌ನಿಂದ 2ನೇ ಪಟ್ಟಿ ಬಿಡುಗಡೆ ಆದರೂ ಸಿದ್ದರಾಮಯ್ಯ ಅವರು ಸ್ಪರ್ಧೆ ಮಾಡಲು ಬಯಸಿದ್ದ ಕೋಲಾರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಈವರೆಗೂ ಘೋಷಣೆ ಮಾಡಿಲ್ಲ.

ಕೋಲಾರ (ಏ.06): ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಿಂದ 2ನೇ ಪಟ್ಟಿ ಬಿಡುಗಡೆ ಆದರೂ ಸಿದ್ದರಾಮಯ್ಯ ಅವರು ಸ್ಪರ್ಧೆ ಮಾಡಲು ಬಯಸಿದ್ದ ಕೋಲಾರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಈವರೆಗೂ ಘೋಷಣೆ ಮಾಡಿಲ್ಲ.

ಇನ್ನು ಸಿದ್ದರಾಮಯ್ಯ ಅವರಿಗೆ ವರುಣಾ ಕ್ಷೇತ್ರದಿಂದ ಟಿಕೆಟ್‌ ಘೋಷಣೆ ಮಾಡಲಾಗಿದೆ. ಆದರೆ, ಈಗ ಕೋಲಾರದಿಂದಲೂ ಸಿದ್ದರಾಮಯ್ಯ ಅವರಿಗೆ ಟಿಕೆಟ್‌ ನೀಡಿದರೆ ತಮಗೂ ಕೂಡ 2 ವಿಧಾನಸಭಾ ಕ್ಷೇತ್ರಗಳನ್ನು ಕೊಡುವಂತೆ ಡಾ.ಜಿ. ಪರಮೇಶ್ವರ ಅವರೂ ಕೂಡ ಆಗ್ರಹ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೋಲಾರ ಕ್ಷೇತ್ರವನ್ನು ಸಿದ್ದರಾಮಯ್ಯ ಸ್ಪರ್ಧೆಗೆ ಕೊಡಬೇಕಾ ಬೇಡವಾ ಎನ್ನುವುದು ಇನ್ನೂ ಸಿಇಸಿ ಸಭೆಯಲ್ಲಿ ಚರ್ಚಿತ ವಿಷಯವಾಗಿಯೇ ಉಳಿದಿದೆ. 

ಇನ್ನು ಕಾಂಗ್ರೆಸ್‌ ಹೈಕಮಾಂಡ್‌ನಿಂದ ಸಿದ್ದರಾಮಯ್ಯಗೆ ನೀವು ಶೇ.1 ಪರ್ಸೆಂಟ್‌ ಕೂಡ ರಿಸ್ಕ್‌ ತೆಗೆದುಕೊಳ್ಳಬೇಡಿ. ನಾಮಪತ್ರ ಸಲ್ಲಿಕೆ ಮಾಡಿದ ನಂತರ ಕ್ಷಣದಿಂದ ರಾಜ್ಯಾದ್ಯಂತ ಪ್ರವಾಸ ಮಾಡಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಸೂಚನೆ ನೀಡಿದೆ. ಜೊತೆಗೆ, ಈಗಾಗಲೇ ವರುಣಾ ಕ್ಷೇತ್ರ ಸಿದ್ದರಾಮಯ್ಯ ಅವರಿಗೆ ಗೆಲುವು ಸ್ಪಷ್ಟ ಇರುವಾಗ ಮತ್ತೆ ಯಾಕೆ 2 ಕ್ಷೇತ್ರಗಳನ್ನು ಕೊಡಬೇಕು ಎಂದು ರಾಜ್ಯ ನಾಯಕರು ಪ್ರಶ್ನೆ ಮಾಡಿದ್ದಾರೆ. ಆದರೆ, ಈಗ ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆಯಿಂದ ಸುತ್ತಲಿನ 15ಕ್ಕೂ ಅಧಿಕ ಕ್ಷೇತ್ರಗಳ ಅಭ್ಯರ್ಥಿಗಳು ಗೆಲ್ಲಲು ಅನುಕೂಲ ಆಗಲಿದೆ ಎಂಬ ಮಾತು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರಿಗೆ 2ನೇ ಟಿಕೆಟ್‌ ನೀಡುವ ಬಗ್ಗೆ ಸ್ವತಃ ರಾಹುಲ್‌ ಗಾಂಧಿ ವಿವೇಚನೆಗೆ ಬಿಡಲಾಗಿದೆ ಎಂದು ತಿಳಿದುಬಂದಿದೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more