Karnataka Congress Politics: ಸಿದ್ದರಾಮಯ್ಯ ಆಪ್ತ ಆಶೋಕ ಪಟ್ಟಣ್‌ಗೆ ಕೆಪಿಸಿಸಿ ಶಿಸ್ತು ಸಮಿತಿ ನೋಟಿಸ್!

Karnataka Congress Politics: ಸಿದ್ದರಾಮಯ್ಯ ಆಪ್ತ ಆಶೋಕ ಪಟ್ಟಣ್‌ಗೆ ಕೆಪಿಸಿಸಿ ಶಿಸ್ತು ಸಮಿತಿ ನೋಟಿಸ್!

Published : Feb 02, 2022, 10:24 AM ISTUpdated : Feb 02, 2022, 10:25 AM IST

*'ಕೈ' ಪಾಳಯದಲ್ಲಿ ಸಿದ್ದು Vs ಡಿಕೆಶಿ ಅಂತರ್ಯುದ್ಧ
*ಡಿಕೆಶಿ ಬಗ್ಗೆ ಗುಸು ಗುಸು: ಸಿದ್ದು ಆಪ್ತ ಪಟ್ಟಣ್‌ಗೆ ಕೆಪಿಸಿಸಿ ನೋಟಿಸ್‌
*ಕಾರಣ ಕೇಳಿದ  ಶಿಸ್ತು ಪಾಲನಾ ಸಮಿತಿ ಅಧ್ಯಕ್ಷ ಡಾ.ಕೆ.ರೆಹಮಾನ್‌ 

ಬೆಂಗಳೂರು (ಫೆ. 02): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (D K  Shivakumar) ಅವರ ವಿರುದ್ಧ ಮಾತನಾಡಿರುವ ವಿಡಿಯೋಗೆ ಸಂಬಂಧಿಸಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (siddaramaiah) ಅವರ ಆಪ್ತ, ಮಾಜಿ ಶಾಸಕ ಅಶೋಕ್‌ ಪಟ್ಟಣ್‌ ( Ashok Pattanshetti) ಅವರಿಗೆ ಸಮುಜಾಯಿಷಿ ಕೇಳಿ ಕಾಂಗ್ರೆಸ್‌ ಪಕ್ಷ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿದೆ.ಕೆಪಿಸಿಸಿ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷ ಡಾ.ಕೆ.ರೆಹಮಾನ್‌ ಖಾನ್‌ ಅವರು, ಅಶೋಕ್‌ ಪಟ್ಟಣ್‌ ಅವರಿಗೆ ಅಶಿಸ್ತಿನ ನಡವಳಿಕೆಗಾಗಿ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಿದ್ದಾರೆ.

ಇದನ್ನೂ ಓದಿ: Karnataka Politcs: ನನ್ನ ಹುದ್ದೆಗೂ, ಇಬ್ರಾಹಿಂ ವಿಚಾರಕ್ಕೂ ಸಂಬಂಧ ಇಲ್ಲ: ಖಾದರ್‌

ಪಕ್ಷದ ನಾಯಕರೂ, ಅನುಭವಿ ಶಾಸಕರೂ ಆಗಿ ತಿಳಿದಿರುವವರೂ ಆದ ತಾವು ಖಾಸಗಿಯಾಗಿ ಮಾತನಾಡುವಾಗ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರ ಘನತೆ-ಗೌರವಗಳಿಗೆ ಕುಂದುಂಟಾಗುವಂತೆ ಮತ್ತು ಕಾಂಗ್ರೆಸ್‌ ಪಕ್ಷಕ್ಕೆ ಅಪಾರ ಹಾನಿಯಾಗುವಂಥ ವಿಚಾರಗಳನ್ನು ಮಾತನಾಡಿರುವುದು ದೃಶ್ಯ ಮಾಧ್ಯಮಗಳಲ್ಲಿ ಹಾಗೂ ಪತ್ರಿಕಾ ಮಾಧ್ಯಮಗಳಲ್ಲಿ ವರದಿಯಾಗಿದೆ. ತಾವು ಈ ಸಂದರ್ಭದಲ್ಲಿ ಮಾತನಾಡಿಕೊಂಡಿರುವ ವಿಚಾರಗಳು ಆಧಾರರಹಿತವಾಗಿದ್ದು, ಕಾಂಗ್ರೆಸ್‌ ಪಕ್ಷವು ಇದನ್ನು ಸಂಪೂರ್ಣವಾಗಿ ಖಂಡಿಸುತ್ತದೆ ಮತ್ತು ನಿರಾಕರಿಸುತ್ತದೆ. ತಮ್ಮ ಈ ವರ್ತನೆಯಿಂದ ಪಕ್ಷದ ಘನತೆ ಗೌರವಗಳಿಗೆ ಕುಂದುಂಟಾಗಿದೆ. ಜತೆಗೆ ಅದು ಪಕ್ಷ ವಿರೋಧಿ ಚಟುವಟಿಕೆಯೂ ಆಗಿದೆ. ಈ ಹಿನ್ನೆಲೆಯಲ್ಲಿ ತಾವು ತಮ್ಮ ನಡವಳಿಕೆ ಬಗ್ಗೆ ಏಳು ದಿನಗಳೊಳಗಾಗಿ ಸಮಜಾಯಿಷಿ ನೀಡುವಂತೆ ನೋಟಿಸ್‌ನಲ್ಲಿ ಸೂಚಿಸಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more