ಭಂಡತನ ಮಾಡಿ ವಿಧಾನಸೌಧದಿಂದ ಬಿಜೆಪಿ ಶಾಸಕರನ್ನು ಹೊರಗೆ ಹಾಕಿದ್ದಾರೆ. ಈ ಸರ್ಕಾರಕ್ಕೆ ಯಾವುದೇ ನೈತಿಕತೆ ಇಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಕಾನೂನನ್ನು ಮೀರಿ ಐಎಎಸ್ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಇದನ್ನು ಪ್ರಶ್ನಿಸಿದ್ರೆ, ಭಂಡತನದ ಉತ್ತರ ಕೊಟ್ಟಿದ್ದಾರೆ ಎಂದು ಹೇಳುವ ಮೂಲಕ ಸರ್ಕಾರದ ವಿರುದ್ಧ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ(KS Eshwarappa) ಕಿಡಿಕಾರಿದ್ದಾರೆ. ಭಂಡತನ ಮಾಡಿ ವಿಧಾನಸೌಧದಿಂದ ಬಿಜೆಪಿ(BJP) ಶಾಸಕರನ್ನು ಹೊರಗೆ ಹಾಕಿದ್ದಾರೆ. ಕಾಂಗ್ರೆಸ್(Congress) ಸರ್ಕಾರಕ್ಕೆ ಯಾವ ನೈತಿಕತೆಯೂ ಇಲ್ಲ. ದೇಶದಲ್ಲಿ ತಲೆ ತಗ್ಗಿಸುವಂತ ಕೆಲಸವನ್ನು ಕಾಂಗ್ರೆಸ್ ಮಾಡಿದೆ ಎಂದು ಈಶ್ವರಪ್ಪ ಆಕ್ರೋಶವನ್ನು ಹೊರಹಾಕಿದ್ದಾರೆ. ವಿಧಾನಸಭಾ ಕಲಾಪದಲ್ಲಿ ಈ ವಿಷಯಕ್ಕೆ ಸಂಬಂಧಿಸಿದಂತೆ ಬುಧವಾರ ಗಲಾಟೆ ನಡೆದಿದ್ದು, 10 ಬಿಜೆಪಿ ಶಾಸಕರನ್ನು ಅಮಾನತು ಮಾಡಲಾಗಿದೆ.
ಇದನ್ನೂ ವೀಕ್ಷಿಸಿ: ಮನೆ ಮಹಾಲಕ್ಷ್ಮಿಗೆ ‘ಗೃಹಲಕ್ಷ್ಮಿ’ಯ ಅನುಗ್ರಹ: ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಪಾವತಿಸಬೇಕಿಲ್ಲ..!