ಬಸ್ ಚಾಲಕ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಟ್ವಿಸ್ಟ್‌: ವರ್ಗಾವಣೆಗೆ ಬೇಸತ್ರಾ ಜಗದೀಶ್‌..?

ಬಸ್ ಚಾಲಕ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಟ್ವಿಸ್ಟ್‌: ವರ್ಗಾವಣೆಗೆ ಬೇಸತ್ರಾ ಜಗದೀಶ್‌..?

Published : Jul 06, 2023, 12:13 PM ISTUpdated : Jul 06, 2023, 12:15 PM IST

ಕೆಎಸ್ಆರ್‌ಟಿಸಿ ಬಸ್ ಚಾಲಕ ಜಗದೀಶ್‌ ಆತ್ಮಹತ್ಯೆ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದಿದೆ.

ಕೆಎಸ್ಆರ್‌ಟಿಸಿ (KSRTC) ಬಸ್‌ ಚಾಲಕನ ಆತ್ಮಹತ್ಯೆ ಯತ್ನ ಪ್ರಕರಣ ರಾಜಕೀಯ ತಿರುವು ಪಡೆದಿದೆ. ನಾಗಮಂಗಲ ಕೆಎಸ್‌ಆರ್‌ಟಿಸಿ ಚಾಲಕ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷ ಸೇವಿಸಿದ ಚಾಲಕ ಜಗದೀಶ್‌ (Jagadish) ಸ್ಥಿತಿ ಚಿಂತಾಜನಕವಾಗಿದೆ. ಇದೀಗ ಈ ಪ್ರಕರಣ ರಾಜಕೀಯ ತಿರುವು ಪಡೆದಿದೆ. ಅಲ್ಲದೇ ಜಗದೀಶ್‌ನನ್ನು ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ. ಇವರು ವರ್ಗಾವಣೆಗೆ ಬೇಸತ್ತು ವಿಷವನ್ನು ಸೇವಿಸಿದ್ದರು. ನಾಗಮಂಗಲದ ಕೆಎಸ್‌ಆರ್‌ಟಿಸಿ ಚಾಲಕರಾಗಿದ್ದರು. ಚಲುವರಾಯಸ್ವಾಮಿ ಸೂಚನೆ ಮೇರೆಗೆ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಜಗದೀಶ್‌ ಅವರ ತಂದೆ ಜೆಡಿಎಸ್‌ಗೆ ಬೆಂಬಲ ನೀಡಿದ ಹಿನ್ನೆಲೆ ಈ ವರ್ಗಾವಣೆ ಮಾಡಲಾಗಿದೆ ಎನ್ನಲಾಗ್ತಿದೆ. ಆಸ್ಪತ್ರೆಗೆ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ (HD  Kumaraswamy) ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ಪವಾರ್ VS ಪವಾರ್.. ಠಾಕ್ರೆ VS ಠಾಕ್ರೆ ಯುದ್ಧ..!: ಎಲ್ಲೆಲ್ಲಿ..ಹೇಗೆಲ್ಲಾ..ಕುಟುಂಬಗಳನ್ನೇ ಒಡೆದು ಹಾಕಿದೆ ರಾಜಕಾರಣ?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more