ಉಪಸಭಾಪತಿ ಧರ್ಮೇಗೌಡ ಆತ್ಮಹತ್ಯೆ; ಅಗಲಿದ ಗೆಳೆಯನನ್ನು ಧರ್ಮರಾಯ ಎಂದು ಕುಮಾರಣ್ಣ ಕಣ್ಣೀರಿಟ್ಟಿದ್ದೇಕೆ..?

ಉಪಸಭಾಪತಿ ಧರ್ಮೇಗೌಡ ಆತ್ಮಹತ್ಯೆ; ಅಗಲಿದ ಗೆಳೆಯನನ್ನು ಧರ್ಮರಾಯ ಎಂದು ಕುಮಾರಣ್ಣ ಕಣ್ಣೀರಿಟ್ಟಿದ್ದೇಕೆ..?

Published : Dec 30, 2020, 10:50 AM IST

ಸಜ್ಜನ ರಾಜಕಾರಣಿ, ಜೆಡಿಎಸ್‌ ಶಾಸಕ, ವಿಧಾನಪರಿಷತ್‌ ಉಪಸಭಾಪತಿ ಎಸ್‌.ಎಲ್‌.ಧರ್ಮೇಗೌಡ (65) ಅವರು ಸೋಮವಾರ ರಾತ್ರಿ ಸಾವಿಗೆ ಶರಣಾಗಿದ್ದಾರೆ. ಹುಬ್ಬಳ್ಳಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಜನ ಶತಾಬ್ದಿ ರೈಲಿಗೆ ಕಡೂರು ತಾಲೂಕಿನ ಗುಣಸಾಗರ ಬಳಿ ಸಂಜೆ 6.30ರ ವೇಳೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಬೆಂಗಳೂರು (ಡಿ. 30): ಸಜ್ಜನ ರಾಜಕಾರಣಿ, ಜೆಡಿಎಸ್‌ ಶಾಸಕ, ವಿಧಾನಪರಿಷತ್‌ ಉಪಸಭಾಪತಿ ಎಸ್‌.ಎಲ್‌.ಧರ್ಮೇಗೌಡ (65) ಅವರು ಸೋಮವಾರ ರಾತ್ರಿ ಸಾವಿಗೆ ಶರಣಾಗಿದ್ದಾರೆ. ಹುಬ್ಬಳ್ಳಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಜನ ಶತಾಬ್ದಿ ರೈಲಿಗೆ ಕಡೂರು ತಾಲೂಕಿನ ಗುಣಸಾಗರ ಬಳಿ ಸಂಜೆ 6.30ರ ವೇಳೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ  ರಾಜ್ಯರಾಜಕಾರಣದಲ್ಲಿ ತಲ್ಲಣ ಮೂಡಿಸಿದ್ದು, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪರಾದಿಯಾಗಿ ಪಕ್ಷಾತೀತವಾಗಿ ಹಲವು ಗಣ್ಯರು ಆಘಾತ ವ್ಯಕ್ತಪಡಿಸಿದ್ದಾರೆ.

'ಧರ್ಮೇಗೌಡ ನಿಧನ ವೈಯಕ್ತಿಕವಾಗಿ ನನಗೆ ತುಂಬಾ ನೋವುಂಟು ಮಾಡಿದೆ. ನನ್ನ ಜೀವನದಲ್ಲಿ ಅತ್ಯಂತ ಘೋರವಾದಂತಹ ಘಟನೆ ಇದು. ಪರಿಷತ್‌ನ ಅಧಿವೇಶನಕ್ಕೂ ಮುನ್ನ ತಮ್ಮ ಬಳಿ ಬಂದಿದ್ದರು. ಆ ಸಂದರ್ಭದಲ್ಲಿ ಅವರಿಗೆ ಸೂಕ್ತ ಸಲಹೆ ನೀಡಿದ್ದು, ಸಭಾಪತಿ ಸ್ಥಾನದಲ್ಲಿ ಕೂರಬೇಡಿ ಎಂದು ಹೇಳಿದ್ದೆ. ಅವರ ಕೊನೆ ಗಳಿಕೆಯ ರಾಜಕೀಯ ಜೀವನ ತೀವ್ರ ನೋವುಂಟು ಮಾಡಿದೆ' ಎಂದು ಹೇಳಿದರು.'ಆತ ನನ್ನ ಆತ್ಮೀಯ ಸ್ನೇಹಿತನಾಗಿದ್ದವನು. ಧರ್ಮರಾಯನಂತಹ ವ್ಯಕ್ತಿತ್ವ ಅವನದ್ದು' ಎಂದು ಕುಮಾರಣ್ಣ ಕಣ್ಣೀರಿಟ್ಟಿದ್ಧಾರೆ. ಹಾಗಾದರೆ ದೇವೇಗೌಡ್ರ ಕುಟುಂಬಕ್ಕೂ, ಧರ್ಮೇಗೌಡ್ರಿಗೂ ಅವಿನಾಭಾವ ಸಂಬಂಧ ಹೇಗಿತ್ತು..? ಇಲ್ಲಿದೆ ಇನ್‌ಸೈಡ್‌ ಪಾಲಿಟಿಕ್ಸ್..!

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!