Nov 18, 2021, 10:34 AM IST
ಬೆಂಗಳೂರು (ನ.18): ಕರ್ನಾಟಕ ರಾಜ್ಯದ ವಿಧಾನ ಪರಿಷತ್ ಚುನಾವನಾ ಅಖಾಡ ಫುಲ್ ರಂಗೇರಿದೆ. ಆದರೆ ದಳಪತಿಗಳು ಮಾತ್ರ ಫುಲ್ ಸೈಲೆಂಟ್ ಆಗಿದ್ದಾರೆ. ಆದರೆ ಇತ್ತ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ವಿಜಯ ಮಾಲೆ ಧರಿಸಲು ಗೆಲುವನ್ನು ತಮ್ಮದಾಗಿಸಿಕೊಳ್ಳಲು ಬಿಜೆಪಿ ಕಾಂಗ್ರೆಸ್ ಟೊಂಕ ಕಟ್ಟಿ ನಿಂತು ಯತ್ನ ಮಾಡುತ್ತಿವೆ. ಆದರೆ ದಳ ಪತಿಗಳು ಮಾತ್ರ ಇನ್ನೂ ಅಭ್ಯರ್ಥಿಗಳ ಹುಡುಕಾಟದಲ್ಲೇ ನಿರತರಾಗಿದ್ದಾರೆ.
ಕಾಂಗ್ರೆಸ್ ಮಾಜಿ ಸಿಎಂ ನಮ್ಮ ಶಾಸಕರನ್ನು ಸಂಪರ್ಕಿಸಿದ್ದಾರೆ: ಎಚ್‌ಡಿಕೆ ಸ್ಫೋಟಕ ಹೇಳಿಕೆ
ಡಿಸೆಂಬರ್ 10 ರಂದು ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ನಡೆಯುತ್ತಿದ್ದು ಅಭ್ಯರ್ಥಿಗಳನ್ನು ಹುಡುಕಲು ಜೆಡಿಎಸ್ ಮುಖಂಡರು ಮೀಟಿಂಗ್ ಮೇಲೆ ಮೀಟಿಂಗ್ ನಡೆಸುತ್ತಿದ್ದಾರೆ. ಆದರೆ ಅಭ್ಯರ್ಥಿಗಳ ಪಟ್ಟಿ ಮಾತ್ರ ಇನ್ನೂ ಫೈನಲ್ ಆಗಿಲ್ಲ. 25 ಪರಿಷತ್ ಸ್ಥಾನಗಳಲ್ಲಿ ಹಾಲಿ ನಾಲ್ಕರಲ್ಲಿ ಜೆಡಿಎಸ್ ಸದಸ್ಯರಿದ್ದಾರೆ. ಅದರಲ್ಲೂ ನಾಲ್ವರು ಬೇರೆ ಪಕ್ಷದತ್ತ ಮುಖ ಮಾಡಿದ್ದಾರೆ. ಇದೀಗ ಅಭ್ಯರ್ಥಿಗಳ ಕೊರತೆ ತೀವ್ರವಾಗಿ ಕಾಣುತ್ತಿದೆ.