ಭ್ರಷ್ಟಾಚಾರ ಆರೋಪಿ ಮಾಡಾಳ್‌ ವಿಜಯೋತ್ಸವ, ಪಾರದರ್ಶಕ ತನಿಖೆ ನಡೆಯುವ ಸಾಧ್ಯತೆ ಇದೆಯೇ?

Mar 7, 2023, 10:15 PM IST

ಬೆಂಗಳೂರು(ಮಾ.7):  ಕಳೆದ ಐದು ದಿನಗಳಿಂದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಾಪತ್ತೆಯಾಗಿದ್ದರು. ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಮಾಡಾಳ್ ವಿರೂಪಾಕ್ಷಪ್ಪಗೆ ಅದ್ಧೂರಿ ಸ್ವಾಗತ ಕೋರಿದ್ದಾರೆ. ಕಾರಿನಲ್ಲಿ ಮೆರವಣಿಗೆ ಕೂಡ ಮಾಡಿದ್ದು, ಇದು ವ್ಯಾಪಕ ಟೀಕೆಗೆ ಕಾರಣವಾಗಿದೆ. ಮಾತ್ರವಲ್ಲ ಇವರ ವಿರುದ್ಧದ ತನಿಖೆ ಪಾರದರ್ಶಕತೆಯಾಗಿ ಇರಬಹುದೇ ಎಂಬ ಪ್ರಶ್ನೆ ಎದ್ದಿದೆ. ಪುತ್ರ BWSSB ಚೀಫ್ ಅಕೌಂಟೆಂಟ್ ಪ್ರಶಾಂತ್ ಮಾಡಾಳ್ 81 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟು 40 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದರು.