ಮಹಾರಾಷ್ಟ್ರ ಮೈತ್ರಿ ಸರ್ಕಾರದ ಪತನ ಸನಿಹವಾಗುತ್ತಿದೆ. ಇದರ ಬೆನ್ನಲ್ಲೇ ಉದ್ಧವ್ ಠಾಕ್ರೆ ರಾಜೀನಾಮೆ ಸುಳಿವು ನೀಡಿದ್ದಾರೆ. ಭಾಷಣ ಬಳಿಕ ಸಿಎಂ ತಮ್ಮ ಅಧಿಕೃತ ನಿವಾಸ ತೊರೆದಿದ್ದಾರೆ.ಮಹಾರಾಷ್ಟ್ರ ಸರ್ಕಾರದಲ್ಲಿ ಬಿರುಗಾಳಿ ಎದ್ದಿದೆ. ಏಕನಾಥ ಶಿಂಧೆ ನೇತೃತ್ವದಲ್ಲಿ ಬಂಡಾಯ ಎದ್ದಿರುವ ಶಿವಸೇನೆ ನಾಯಕರು ತಮ್ಮದೇ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ. ಸಿಎಂ ಉದ್ದವ್ ಠಾಕ್ರೆ ತಮ್ಮ ಭಾಷಣದಲ್ಲಿ ರಾಜೀನಾಮೆ ಸುಳಿವು ನೀಡಿದ್ದಾರೆ. ಇದೀಗ ಮಹಾರಾಷ್ಟ್ರದಲ್ಲಿ ರಾಜಕೀಯ ಪರಿಸ್ಥಿತಿ ಕ್ಷಣ ಕ್ಷಣಕ್ಕೂ ಬದಲಾಗಲಿದೆ