Mar 8, 2022, 7:30 PM IST
ಮಂಡ್ಯ, (ಮಾ.08): ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿ ದೇಶದೆಲ್ಲೆಡೆ ಸುದ್ದಿಯಾಗಿದ್ದ ಸಂಸದೆ ಸುಮಲತಾ ಅಂಬರೀಶ್ ಇದೀಗ ಮತ್ತೆ ರಾಜ್ಯ ರಾಜಕಾರಣದ ವಿಚಾರವಾಗಿ ಸುದ್ದಿಯಾಗಿದೆ.
ಹೌದು..ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ರಾಷ್ಟ್ರ ರಾಜಕಾರಣ ಬಿಟ್ಟು ರಾಜ್ಯ ರಾಜಕಾರಣಕ್ಕೆ ಪ್ರವೇಶ ಮಾಡುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಅಂದ್ರೆ ಅವರು ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡ್ತಾರೆ ಎನ್ನುವ ಮಾತುಗಳು ಹರಿದಾಡುತ್ತಿವೆ.
Mandya Rain Effect: ಶೀಘ್ರ ಸರ್ಕಾರದಿಂದ ಪರಿಹಾರ ಬಿಡುಗಡೆ ಭರವಸೆ ನೀಡಿದ ಸಂಸದೆ ಸುಮಲತಾ
ರಾಜ್ಯ ರಾಜಕಾರಣಕ್ಕೆ ಬರುತ್ತಾರೆ ಎಂಬ ವಿಚಾರ ಇದೀಗ ಭಾರೀ ಚರ್ಚೆಯಾಗುತ್ತಿದೆ. ಈ ಸಂಬಂಧ ಸ್ವತಃ ಸುಮಲತಾ ಅವರೇ ಇದೀಗ ಪ್ರತಿಕ್ರಿಯಿಸಿ ಸ್ಪಷ್ಟನೆ ಕೊಟ್ಟಿದ್ದಾರೆ.