Dec 7, 2022, 11:02 PM IST
ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ 134 ಸ್ಥಾನ ಗೆದ್ದು ಅಧಿಕಾರಕ್ಕೇರಿದೆ. ಆದರೆ ಕಳೆದ 15 ವರ್ಷದಿಂದ ಅಧಿಕಾರದಲ್ಲಿದ್ದ ಬಿಜೆಪಿ ಇದೀಗ ಎರಡನೇ ಪಕ್ಷವಾಗಿ ಕುಸಿದಿದೆ. ಆದರೆ ಕಾಂಗ್ರೆಸ್ ಕೇವಲ 9 ವಾರ್ಡ್ ಗೆದ್ದು ಪಾತಾಳಕ್ಕೆ ಇಳಿದಿದೆ. ಡಿಸೆಂಬರ್ 8ಕ್ಕೆ ಹಿಮಾಚಲ ಪ್ರದೇಶ ಹಾಗೂ ಗುಜರಾತ್ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬೀಳಲಿದೆ. ಸಮೀಕ್ಷೆಗಳ ಪ್ರಕಾರ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರಾನೇರ ಸ್ಪರ್ಧೆ ಇದೆ ಎಂದಿದೆ. ಇತ್ತ ಪ್ರತಿ 5 ವರ್ಷಕ್ಕೊಮ್ಮೆ ಸರ್ಕಾರ ಬದಲಿಸುವ ಹಿಮಾಚಲದಲ್ಲಿ ಈ ಬಾರಿ ಮತ್ತೆ ಬಿಜೆಪಿಗೆ ಅಧಿಕಾರ ನೀಡಿ ಸಂಪ್ರದಾಯಕ್ಕೆ ಬ್ರೇಕ್ ಹಾಕುತ್ತಾ ಅನ್ನೋ ಕುತೂಹಲ ಹೆಚ್ಚಾಗಿದೆ.ಕಳೆದ 27 ವರ್ಷಗಳಿಂದ ಗುಜರಾತ್ನಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಈ ಬಾರಿ ಸಮೀಕ್ಷೆಗಳ ಪ್ರಕಾರ ಬಿಜೆಪಿ ಅಧಿಕಾರ ಮತ್ತೆ ಅಧಿಕಾರಕ್ಕೆ ಬರಲಿದೆ ಎನ್ನುತ್ತಿದೆ. ಆದರೆ ಸಮೀಕ್ಷೆಗಳು ಹೇಳುತ್ತಿರುವುದೇನು? ಗುಜರಾತ್ನ ರಿಯಾಲಿಟಿ ಏನು? ಇಲ್ಲಿದೆ ಸಂಪೂರ್ಣ ಚಿತ್ರಣ