May 14, 2023, 3:53 PM IST
ಬೆಂಗಳೂರು(ಮೇ.14): ಕಾಂಗ್ರೆಸ್ ವಲಯದಲ್ಲಿ ಮುಂದಿನ ಮುಖ್ಯಮಂತ್ರಿ ಯಾರು? ಅಂತ ಚರ್ಚೆಯಾದರೆ, ಬಿಜೆಪಿ ವಲಯದಲ್ಲಿ ಸೋಲು ಯಾಕಾಯ್ತು ಅಂತ ವಿಮರ್ಷಣೆ ಸಭೆ ನಡೆಯುತ್ತಿದೆ. ನಗರದ ಬಿಜೆಪಿ ಕಚೇರಿಯಲ್ಲಿ ನಾಯಕರು ಸಭೆ ನಡೆಸುತ್ತಿದ್ದಾರೆ. ಸಭೆಯಲ್ಲಿ ಸೋಲು, ಗೆಲುವಿನ ಬಗ್ಗೆ ಪರಾಮರ್ಶೆ ನಡೆಯುತ್ತಿದೆ. ಚರ್ಚೆ ಬಳಿಕ ಹೈಕಮಾಂಡ್‌ಗೆ ವರದಿ ನೀಡುವ ಸಾಧ್ಯತೆ ಇದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಕಳಪೆ ಸಾಧನೆ ಮಾಡಿದೆ. ಸಭೆಯಲ್ಲಿ ಅಶ್ವತ್ಥ್ ನಾರಾಯಣ, ಮುನಿರತ್ನ, ಬೈರತಿ ಬಸವರಾಜ ಸೇರಿದಂತೆ ಮತ್ತಿತರ ನಾಯಕರು ಭಾಗಿಯಾಗಿದ್ದಾರೆ.
ಅಜ್ಜಯ್ಯನ ದರ್ಶನ ಪಡೆದ ಡಿಕೆಶಿ: ಸಿಎಂ ಆಗ್ತೀನಿ ಎಂಬ ನಂಬಿಕೆ ನನಗಿದೆ ಎಂದ ಶಿವಕುಮಾರ್