ನೀನು ಸತ್ಯವಂತ, ರಾಮಚಂದ್ರನ 2ನೇ ಅವತಾರ, ಧರ್ಮಸ್ಥಳಕ್ಕೆ ಬಾ, ಮಂಜುನಾಥನ ಮೇಲೆ ಆಣೆ ಮಾಡು

ನೀನು ಸತ್ಯವಂತ, ರಾಮಚಂದ್ರನ 2ನೇ ಅವತಾರ, ಧರ್ಮಸ್ಥಳಕ್ಕೆ ಬಾ, ಮಂಜುನಾಥನ ಮೇಲೆ ಆಣೆ ಮಾಡು

Published : Dec 25, 2024, 09:03 AM IST

ವಿಧಾನಪರಿಷತ್‌ನಲ್ಲಿ ನನ್ನ ವಿರುದ್ಧ ಆಕ್ಷೇಪಾರ್ಹ ಪದ ಬಳಸಿಲ್ಲ ಎಂದಾದರೆ ಧರ್ಮಸ್ಥಳ ಮಂಜುನಾಥೇಶ್ವರನ ಸನ್ನಿಧಾನಕ್ಕೆ ಬನ್ನಿ. ನಾನೂ ಕುಟುಂಬ ಸಮೇತ ಬರುವೆ. ಆಣೆ- ಪ್ರಮಾಣ ಮಾಡೋಣ ಎಂದು ಬಿಜೆಪಿ ಶಾಸಕ ಸಿ.ಟಿ. ರವಿ ಅವರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ನೇರವಾಗಿ ಸವಾಲು ಹಾಕಿದ್ದಾರೆ. 

ಬೆಳಗಾವಿ (ಡಿ.25): ವಿಧಾನಪರಿಷತ್‌ನಲ್ಲಿ ನನ್ನ ವಿರುದ್ಧ ಆಕ್ಷೇಪಾರ್ಹ ಪದ ಬಳಸಿಲ್ಲ ಎಂದಾದರೆ ಧರ್ಮಸ್ಥಳ ಮಂಜುನಾಥೇಶ್ವರನ ಸನ್ನಿಧಾನಕ್ಕೆ ಬನ್ನಿ. ನಾನೂ ಕುಟುಂಬ ಸಮೇತ ಬರುವೆ. ಆಣೆ- ಪ್ರಮಾಣ ಮಾಡೋಣ ಎಂದು ಬಿಜೆಪಿ ಶಾಸಕ ಸಿ.ಟಿ. ರವಿ ಅವರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ನೇರವಾಗಿ ಸವಾಲು ಹಾಕಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಯಾರಿಗೂ ಸವಾಲು ಹಾಕಲ್ಲ, ಜವಾಬ್ ಕೇಳುತ್ತಿಲ್ಲ. ಈ ಪ್ರಕರಣದಲ್ಲಿ ರಾಜಕೀಯ ಸ್ಟಂಟ್ ಬೇಕಿಲ್ಲ. ಮಾಡಬಾರದ್ದನ್ನು ಮಾಡಿ ಬಿಜೆಪಿ ನಾಯಕರು ವಿಜೃಂಭಿಸುತ್ತಿದ್ದಾರೆ. 

ಆಡಬಾರದ್ದನ್ನು ಆಡಿರುವ ಸಿ.ಟಿ. ರವಿ ಹೂವು, ಹಾರ, ತುರಾಯಿ ಹಾಕಿಸಿಕೊಳ್ತಿದ್ದಾರೆ, ಪಟಾಕಿ ಹೊಡಿಸಿಕೊಳ್ತಿದ್ದಾರೆ. ಹಾಗಾಗಿ ಧರ್ಮಸ್ಥಳಕ್ಕೆ ಆಹ್ವಾನಿಸುತ್ತಿದ್ದೇನೆ ಎಂದರು. ಧರ್ಮಸ್ಥಳ ಕ್ಷೇತ್ರದ ಮಂಜುನಾಥನನ್ನು ನಾನು ನಂಬುತ್ತೇನೆ. ದೇವಾನು ದೇವತೆಗಳನ್ನೂ ನಾನು ನಂಬುತ್ತೇನೆ. ಸಿ‌.ಟಿ. ರವಿ ಅವರ ಚಿಕ್ಕಮಗಳೂರಿಗೆ ಧರ್ಮಸ್ಥಳ ತುಂಬಾ ಹತ್ತಿರವಿದೆ. ಅವರೂ ದೇವರನ್ನು ನಂಬುತ್ತಾರೆ. ದತ್ತಮಾಲೆ ಹಾಕುತ್ತಾರೆ. ದತ್ತ ಪೀಠಕ್ಕೆ ಹೋಗುತ್ತಾರೆ. ಆ ಪದ ಬಳಸಿಲ್ಲ ಎಂದರೆ ಕುಟುಂಬ ಸಮೇತ ಧರ್ಮಸ್ಥಳಕ್ಕೆ ಬನ್ನಿ, ನಾನೂ ಬರುತ್ತೇನೆ ಎಂದು ಹೆಬ್ಬಾಳಕರ ಹೇಳಿದರು.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more