ಆರ್.ಆರ್. ನಗರದಲ್ಲಿ ಕಳ್ಳರು, ಕನಕಪುರದಲ್ಲಿ ಸತ್ಯ ಹರಿಶ್ಚಂದ್ರರು ಇದ್ದಾರಾ? ಡಿಕೆಶಿಗೆ ಶಾಸಕ ಮುನಿರತ್ನ ತಿರುಗೇಟು

ಆರ್.ಆರ್. ನಗರದಲ್ಲಿ ಕಳ್ಳರು, ಕನಕಪುರದಲ್ಲಿ ಸತ್ಯ ಹರಿಶ್ಚಂದ್ರರು ಇದ್ದಾರಾ? ಡಿಕೆಶಿಗೆ ಶಾಸಕ ಮುನಿರತ್ನ ತಿರುಗೇಟು

Published : Aug 16, 2023, 07:19 PM IST

ಬೆಂಗಳೂರಿನ ಆರ್.ಆರ್. ನಗರದಲ್ಲಿ ಮಾತ್ರವೇ ಕಳ್ಳರಿದ್ದಾರಾ? ಕನಕಪುರದಲ್ಲಿ ಸತ್ಯ ಹರಿಶ್ಚಂದ್ರರು ಇದ್ದಾರಾ?  ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವ ಕುಮಾರ್‌ ಅವರ ವಿರುದ್ಧ ಶಾಸಕ ಮುನಿರತ್ನ ತಿರುಗೇಟು ನೀಡಿದ್ದಾರೆ.

ಬೆಂಗಳೂರು (ಆ.16): ಬೆಂಗಳೂರಿನ ಆರ್.ಆರ್. ನಗರದಲ್ಲಿ ಮಾತ್ರವೇ ಕಳ್ಳರಿದ್ದಾರಾ? ಕನಕಪುರದಲ್ಲಿ ಸತ್ಯ ಹರಿಶ್ಚಂದ್ರರು ಇದ್ದಾರಾ?  ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವ ಕುಮಾರ್‌ ಅವರ ವಿರುದ್ಧ ಶಾಸಕ ಮುನಿರತ್ನ ತಿರುಗೇಟು ನೀಡಿದ್ದಾರೆ.

ವೈಯಕ್ತಿಕವಾಗಿ ಡಿ.ಕೆ. ಸುರೇಶ್, ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಜೊತೆ ಯಾವುದೇ ದ್ವೇಷ ಇಲ್ಲ ಅಧಿಕಾರಕ್ಕೋಸ್ಕರ ನಾನು ಪಕ್ಷ ಬಿಟ್ಟು ಹೋಗಲ್ಲ. ನಾನು ವಿಪಕ್ಷದಲ್ಲಿಯೇ ಇರುತ್ತೇನೆ. ಬಿಜೆಪಿಯಲ್ಲಿ ಬಹಳ ಗೌರವಯುತವಾಗಿ ನೋಡಿಕೊಳ್ಳುತ್ತಿದ್ದಾರೆ. ನಳೀನ್ ಕುಮಾರ್ ಕಟೀಲ್ ಗೌರವದಿಂದ ಮಾತಾಡಿಸುತ್ತಾರೆ, ಎಂದೂ ಏಕವಚನದಿಂದ ಮಾತಾಡಿಸಿಲ್ಲ. ನನ್ನ ಜೀವನದ ಗುರು, ರಾಜಕೀಯ ಗುರು ಬಿ.ಕೆ. ಹರಿಪ್ರಸಾದ್ ಅವರು. ಅದು ರಾಜಕೀಯ ಕಾರಣ ಅಲ್ಲ, ಅದು ನಮ್ಮ ಊರಿನ ಸಂಬಂಧವಾಗಿದೆ. ನನ್ನ ಮುಂದಿನ ಜೀವನದ ಆಧಾರ ಬಿಜೆಪಿ ಚಿಹ್ನೆಯಾಗಿದೆ. ಬಿಜೆಪಿ ಬಗ್ಗೆ ನಂಬಿಕೆ, ಗೌರವ ಇದೆ. 
ಬಿಜೆಪಿ ಶಾಸಕರ ಎಲ್ಲ ಕಾಮಗಾರಿಗಳನ್ನೂ ತನಿಖೆಗಳನ್ನು, ಆರೋಪಗಳನ್ನು ಮಾಡಲಿ. ಒಂದು ವೇಲೆ ನನ್ನ ಶಾಸಕ ಸ್ಥಾನದಿಂದ ತೆಗಿಯಬೇಕು ಎಂಬ ಆಲೋಚನೆ ಇದ್ದರೆ ಅದನ್ನೂ ಮಾಡಲಿ. ಒಂದು ವೇಳೆ ಯಾವುದಾದರೂ ತನಿಖೆಯಲ್ಲಿ ತಪ್ಪಿತಸ್ಥನಾಗಿ ಮಾಡಿ ಜೈಲಿಗೆ ಕಳಿಸಿದರೂ ಕಳಿಸಲಿ. ಅವರ ಕೈಯಲ್ಲಿ ಅಧಿಕಾರ ಇದೆ, ಯಾವುದನ್ನಾದರೂ ಮಾಡಲಿ. ಬೆಂಗಳೂರಿನಲ್ಲಿ ಒಟ್ಟು 28 ವಿಧಾನಸಭಾ ಕ್ಷೇತ್ರಗಳಿವೆ. ಎಲ್ಲ ಕ್ಷೇತ್ರಗಳಲ್ಲಿ ಆಗಿದ್ದು, ನನ್ನ ಕ್ಷೇತ್ರದಲ್ಲಿಯೂ ಆಗುತ್ತದೆ. 28 ಕ್ಷೇತ್ರಗಳಲ್ಲಿ ಏನಾಗುತ್ತದೆಯೋ ರಾಜರಾಜೇಶ್ವರಿ ನಗರದಲ್ಲಿಯೂ ಆಗುತ್ತದೆ. ಒಂದು ವೇಳೆ ಆರ್‌.ಆರ್. ನಗರದಲ್ಲಿ ಮಾತ್ರ ಕಳ್ಳರಿದ್ದಾರೆ ಎಂಬ ತನಿಖೆ ಮಾಡಿದರೆ ಮುಂದಿನ ದಿನಗಳಲ್ಲಿ ಯಾವ ತನಿಖೆಗೆ ಕೊಡಬೇಕೋ ಅದು ನನಗೂ ಗೊತ್ತಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
Read more