News Hour: ಆರ್‌.ಅಶೋಕ್‌ಗೆ ವಿಪಕ್ಷ ನಾಯಕನ ಪಟ್ಟ, ಬಿಜೆಪಿಯಲ್ಲಿ ಬಂಡಾಯ ಸ್ಫೋಟ!

News Hour: ಆರ್‌.ಅಶೋಕ್‌ಗೆ ವಿಪಕ್ಷ ನಾಯಕನ ಪಟ್ಟ, ಬಿಜೆಪಿಯಲ್ಲಿ ಬಂಡಾಯ ಸ್ಫೋಟ!

Published : Nov 17, 2023, 11:33 PM IST

ಬಿಜೆಪಿ ವಿಪಕ್ಷ ನಾಯಕನಾಗಿ ಪದ್ಮನಾಭನಗರದ ಪ್ರಬಲ ಒಕ್ಕಲಿಗ ನಾಯಕ ಆರ್‌.ಅಶೋಕ್‌ ಅವರನ್ನು ಆಯ್ಕೆ ಮಾಡಿದೆ. ಅಶೋಕ್‌ ಆಯ್ಕೆ ಮೂಲಕ ಯಡಿಯೂರಪ್ಪ ಬಣ ಮತ್ತೊಮ್ಮೆ ಮೇಲುಗೈ ಸಾಧಿಸಿದೆ. ಅಶೋಕ್‌ ಅವರ ಹೆಸರನ್ನು ಬಿಎಸ್‌ ಯಡಿಯೂರಪ್ಪ ಅವರು ಘೋಷಿಸಿದರು.
 

ಬೆಂಗಳೂರು (ನ.17): ಆರ್‌.ಅಶೋಕ್‌ ವಿಪಕ್ಷ ನಾಯಕರಾಗಿ ಆಯ್ಕೆಯಾಗುವ ಸೂಚನೆ ಸಿಕ್ಕಂತೆಯೇ ಬಿಜೆಪಿಯಲ್ಲಿ ಬಂಡಾಯ ಸ್ಪೋಟವಾಗಿದೆ. ಎಸ್‌ಟಿ ಸೋಮಶೇಖರ್‌, ಶಿವರಾಮ್‌ ಹೆಬ್ಬಾರ್‌ ಗೈರಾಗಿದ್ದರೆ, ಬಸವನಗೌಡ ಪಾಟೀಲ್‌ ಯತ್ನಾಳ್‌, ರಮೇಶ್‌ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಬಂದಷ್ಟೇ ವೇಗವಾಗಿ ಹೊರನಡೆದಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟವನ್ನು ಲಿಂಗಾಯತರಿಗೆ ನೀಡಿದ್ದ ಕಾರಣದಿಂದ ವಿಪಕ್ಷ ಸ್ಥಾನ ಒಕ್ಕಲಿಗಲಿರಿಗೆ ಸಿಗುವುದು ಖಚಿತವಾಗಿತ್ತು. ಕೊನೆಗೆ ಅಶ್ವತ್ಥ್‌ ನಾರಾಯಣ್‌ ಹಾಗೂ ಅರಗ ಜ್ಞಾನೇಂದ್ರ ಅವರನ್ನು ಹಿಂದೆ ಹಾಕಿ ಅಶೋಕ್‌, ವಿಪಕ್ಷ ನಾಯಕರಾಗಿದ್ದಾರೆ. ಗೃಹಸಚಿವ, ಉಪಮುಖ್ಯಮಂತ್ರಿ ಸ್ಥಾನವನ್ನು ಅಶೋಕ್‌ ನಿಭಾಯಿಸಿದ್ದಾರೆ.

ಠೇವಣಿ ಕಳೆದುಕೊಂಡು ಹೀನಾಯವಾಗಿ ಸೋತ ಬಿಜೆಪಿ ಅಭ್ಯರ್ಥಿ ಈಗ ವಿಪಕ್ಷ ನಾಯಕ: ಅಶೋಕ್‌ ಬಗ್ಗೆ ಕಾಂಗ್ರೆಸ್‌ ಲೇವಡಿ

ರಾಜ್ಯಾಧ್ಯಕ್ಷ ಸ್ಥಾನ ದಕ್ಷಿಣ ಕರ್ನಾಟಕದವರಿಗೆ ಹೋಗಿರುವ ಕಾರಣ, ವಿಪಕ್ಷ ನಾಯಕ ಸ್ಥಾನ ಉತ್ತರ ಕರ್ನಾಟಕದವರಿಗೆ ಸಿಗುವ ನಿರೀಕ್ಷೆ ಇತ್ತು. ಆದರೆ, ಬೇರೆ ಲೆಕ್ಕಾಚಾರದಲ್ಲಿ ಅಶೋಕ್‌ ಅವರನ್ನು ಆಯ್ಕೆ ಮಾಡಿದ್ದಾರೆ ಎಂದು ಶಾಸಕ ಅರವಿಂದ್‌ ಬೆಲ್ಲದ್‌ ಪ್ರತಿಕ್ರಿಯಿಸಿದ್ದಾರೆ. ಇನ್ನು ವಿಪಕ್ಷ ನಾಯಕನ ರೇಸ್‌ನಲ್ಲಿದ್ದ ಅಶ್ವತ್‌ ನಾರಾಯಣ್‌ ಕೂಡ ಪಕ್ಷದ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more