Jul 30, 2020, 3:41 PM IST
ಬೆಂಗಳೂರು(ಜು.30): ನೂತನವಾಗಿ ವಿಧಾನಪರಿಷತ್‌ಗೆ ಆಯ್ಕೆಯಾಗಿರುವ ಸಿ.ಪಿ. ಯೋಗೇಶ್ವರ್ ಮಾಜಿ ಸಿಎಂ ಕುಮಾರಸ್ವಾಮಿ ಬಿಜೆಪಿಗೆ ಪರೋಕ್ಷ ಬೆಂಬಲ ನೀಡಿದ್ದಾರೆ ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ.
ಡಿ.ಕೆ. ಶಿವಕುಮಾರ್ ಹಾಗೂ ಕುಮಾರಸ್ವಾಮಿ ಒಳ ಒಪ್ಪಂದದಿಂದಾಗಿ ನಾನು ಸಾರ್ವತ್ರಿಕ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗಲಿಲ್ಲ. ಈಗ ಇವರಿಬ್ಬರು ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ. ಇವರಿಬ್ಬರಿಗೂ ವಿರೋಧ ಪಕ್ಷದ ನಾಯಕರಾಗಿ ಮುಂದುವರೆಯಲು ಯಾವುದೇ ನೈತಿಕತೆಯಿಲ್ಲ ಎಂದು ಯೋಗೇಶ್ವರ್ ಹೇಳಿದ್ದಾರೆ.
ಖಾಸಗಿ ಆಸ್ಪತ್ರೆ ಮೇಲೆ ಕ್ರಮ ಜರುಗಿಸಲು ಹಿಂದೇಟು ಹಾಕಲ್ಲ: ಸಚಿವ ಶ್ರೀರಾಮುಲು
ಇದೇ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ಬಿಜೆಪಿ ಸೇರಲು ಮುಕ್ತ ಆಹ್ವಾನ ನೀಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.