May 26, 2023, 10:23 AM IST
ಚಿಕ್ಕಬಳ್ಳಾಪುರ: ನಗರದ ಗೋಪಿಕಾ ಚಾಟ್ಸ್ ಬಳಿ ಮೇ. 24 ರಂದು ಹಿಂದೂ ಯುವಕ ಮತ್ತು ಮುಸ್ಲಿಂ ಯುವತಿ ಹೋಟೆಲ್ಗೆ ಹೋಗಿದ್ದಾರೆ. ಈ ವೇಳೆ ಅಲ್ಲಿಗೆ ಬಂದ ಮುಸ್ಲಿಂ ಯುವಕರ ತಂಡ ನೈತಿಕ ಪೊಲೀಸ್ ಗಿರಿ ನಡೆಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನೊಂದ ಯುವತಿ ದೂರನ್ನು ನೀಡಿದ್ದು, ಇಬ್ಬರನ್ನು ಪೊಲೀಸರು ಬಂದಿದ್ದಾರೆ. ನಗರದ ನಕ್ಕಲಕುಂಟೆ ನಿವಾಸಿಗಳಾದ ವಾಯಿದ್ (20), ಸದ್ದಾಂ (21) ಬಂಧಿತ ಆರೋಪಿಗಳು. ಮತ್ತೊಬ್ಬ ಆರೋಪಿ ಇಮ್ರಾನ್ಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ನೈತಿಕ ಪೊಲೀಸ್ ಗಿರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಎಚ್ಚರಿಕೆ ನೀಡಿದ ಬೆನ್ನಲ್ಲೇ ಈ ಘಟನೆ ನಡೆದಿದೆ.
ಇದನ್ನೂ ವೀಕ್ಷಿಸಿ: Today Horoscope: ಇಂದಿನ ರಾಶಿ ಭವಿಷ್ಯ: ಆರೋಗ್ಯ ವೃದ್ಧಿಗೆ ಈ ದಿನ ನಾಗ ದೇವರಿಗೆ ಎಳನೀರು ಅಭಿಷೇಕ ಮಾಡಿ