Aug 21, 2021, 9:36 AM IST
ಬೆಂಗಳೂರು (ಆ.21): ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಭೇಟಿ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸದಾಶಿವನಗರದ ನಿವಾಸದಲ್ಲಿ ರಾತ್ರಿ ಇಬ್ಬರು ನಾಯಕರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ಭಾಷಣದ ವೇಳೆ ಯಡವಟ್ಟು ಮಾಡಿಕೊಂಡ ಡಿಕೆಶಿ, ಜಮೀರ್ ಅಹ್ಮದ್
ಕೆಲ ದಿನಗಳ ಹಿಂದಷ್ಟೇ ಶಾಸಕ ಜಮೀರ್ ನಿವಾಸದ ಮೇಲೆ ಇಡಿ ದಾಲಿ ನಡೆಸಿದ್ದು ಈ ವಿಚಾರವಾಗಿ ನಾಯಕರು ಚರ್ಚೆ ನಡೆಸಿದ್ದಾರೆ. ಇನ್ನು ಇದೇ ವೇಳೆ ಜಮಿರ್ ಅಹಮದ್ ಟ್ವಿಟ್ ಮಾಡಿದ್ದು ನಾನು ಮನೆ ಕಟ್ಟಿಸಿದ್ದೆ ದೊಡ್ಡ ಅಪರಾಧವಾ..? ದೇಶದ ಪ್ರಬಲ ಮುಸ್ಲಿಂ ನಾಯಕರನ್ನು ಟಾರ್ಗೆಟ್ ಮಾಡಾಗುತ್ತಿದೆ. ಮುಸ್ಲಿಮರ ಪಟ್ಟಿಯನ್ನು ಸಿದ್ಧಪಡಿಸಿಕೊಂಡು ಕಿರುಕುಳ ನಿಒಡುವ ಪ್ರಯತ್ನ ನಡೆಯುತ್ತಿದೆ ಎಂದು ಅರೊಪ ಮಾಡಿದರು.