ಮುಡಾ ಕೇಸ್‌ಗೆ ಟ್ವಿಸ್ಟ್: ಸುವರ್ಣ ನ್ಯೂಸ್‌ನಲ್ಲಿ ಸ್ನೇಹಮಯಿ ಕೃಷ್ಣ ಸ್ಫೋಟಕ ಹೇಳಿಕೆ!

ಮುಡಾ ಕೇಸ್‌ಗೆ ಟ್ವಿಸ್ಟ್: ಸುವರ್ಣ ನ್ಯೂಸ್‌ನಲ್ಲಿ ಸ್ನೇಹಮಯಿ ಕೃಷ್ಣ ಸ್ಫೋಟಕ ಹೇಳಿಕೆ!

Published : Dec 18, 2024, 07:50 PM ISTUpdated : Dec 18, 2024, 07:51 PM IST

ಮುಡಾ ಪ್ರಕರಣದಲ್ಲಿ ಸಿಎಂ ವಿರುದ್ಧ ಹೋರಾಟದಿಂದ ಹಿಂದೆ ಸರಿಯಲು ದೂರುದಾರ ಸ್ನೇಹಮಯಿಕೃಷ್ಣಗೆ ಹಣದ ಆಮಿಷ ಒಡ್ಡಲಾಗಿದೆ ಎಂದು ಆರೋಪಿಸಿದ್ದಾರೆ. ಸಿಎಂ ಪತ್ನಿಯ ಆಪ್ತ ಸಹಾಯಕ ಎಂದು ಹೇಳಿಕೊಂಡ ವ್ಯಕ್ತಿಯಿಂದ ಹಣದ ಆಮಿಷ ಬಂದಿದೆ ಎಂದು ತಿಳಿಸಿದ್ದಾರೆ. ಇಡಿ ಮತ್ತು ಲೋಕಾಯುಕ್ತಕ್ಕೆ ದೂರು ನೀಡಿದ್ದಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ತಿಳಿಸಿದ್ದಾರೆ.

ಮುಡಾ ಪ್ರಕರಣದಲ್ಲಿ ಸಿಎಂ ವಿರುದ್ಧ ಹೋರಾಟ ವಿಚಾರದ ಬಗ್ಗೆ ದೂರುದಾರ ಸ್ನೇಹಮಯಿಕೃಷ್ಣ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಸ್ಫೋಟಕ ಹೇಳಿಕೆಗಳನ್ನು ನೀಡಿದ್ದಾರೆ. ಈ ಮುಡಾ ಪ್ರಕರಣದಿಂದ ಹಿಂದೆ ಸರಿಯಲು ನನಗೆ ಹಣದ ಆಮಿಷ ಒಡ್ಡಲಾಗಿದೆ. ಹರ್ಷ ಹಾಗೂ ಶ್ರೀನಿಧಿ ಎಂಬ ಇಬ್ಬರು ವ್ಯಕ್ತಿಗಳಿಂದ ಹಣದ ಆಮಿಷ ಬಂದಿದೆ. ಇನ್ನು ಹಣದ ಆಮಿಷ ಒಡ್ಡಿದ ಹರ್ಷ ಎನ್ನುವ ವ್ಯಕ್ತಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಆಪ್ತ ಸಹಾಯಕ ಎಂದು ಹೇಳಿಕೊಂಡಿದ್ದಾರೆ. ಇದೇ ಡಿ.13 ರಂದು ಮುಡಾ ಬಳಿ ನನ್ನನ್ನು ಭೇಟಿ ಮಾಡಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ಪಾರ್ವತಮ್ಮ ಮಾನಸಿಕವಾಗಿ ನೊಂದಿದ್ದಾರೆ. ಪ್ರಕರಣವನ್ನ ಸಿಬಿಐಗೆ ವಹಿಸಬೇಕೆನ್ನುವ ಅರ್ಜಿ ವಾಪಸ್ ಪಡೆಯಿರಿ. ಲೋಕಾಯುಕ್ತ ಸಮಸ್ಯೆ ನಮಗೆ ಏನು ಸಮಸ್ಯೆ ಇಲ್ಲ. ಸಿಬಿಐ ಆದರೆ ನಮಗೆ ಸಮಸ್ಯೆ ಇದೆ. ನಿಮಗೆ ಎಷ್ಟು ಹಣ ಬೇಕು ಕೇಳಿ ನಾವು ಕೊಡುತ್ತೇವೆಂದು ಹರ್ಷ ಕಾಲು ಹಿಡಿದುಕೊಂಡಿದ್ದಾರಂತೆ. ಆದರೆ, ಇದನ್ನ ನಾನು ನಿರಾಕರಿಸಿದೆ. ಡಿ.15 ರಂದು ಮನೆಗೆ ತೆರಳಿ ಮಗನ ಬಳಿಯಲ್ಲಿ ಇದೇ ವಿಚಾರ ಪ್ರಸ್ತಾಪ ಮಾಡಿದ್ದಾರೆ. ಈಗಾಗಲೇ ಇನ್ನೊಬ್ಬ ಹೋರಾಟಗಾರನಿಗೆ 3 ಕೋಟಿ ರೂ. ಮಾತನಾಡಿ 1.5 ಕೋಟಿ ರೂ. ಕೊಟ್ಟಿದ್ದೇವೆ ಎಂದು ಹರ್ಷ ಹಣದ ಬ್ಯಾಗ್ ತೋರಿಸಿದ್ದಾನೆ. ಹಣದ ಆಮಿಷಕ್ಕೆ ನನ್ನ ಮಗ ಒಪ್ಪಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಅನುದಾನ ಕೇಳಿದ ಶಾಸಕರಿಗೆ ಪಂಗನಾಮ; ಹಾರಿಕೆ ಉತ್ತರ ಕೊಟ್ಟ ಸಿಎಂ ಸಿದ್ದರಾಮಯ್ಯ!

ಇನ್ನು ಈಗಾಗಲೇ ಮನೆ ಬಳಿ ಬಂದ ವಿಡಿಯೋ ಹಾಗೂ ನನಗೆ ಹಣದ ಆಮಿಷ ಒಡ್ಡಲು ನನಗೆ ಫೋನ್ ಮಾಡಿದ ದಾಖಲೆ ಎಲ್ಲವುಗಳನ್ನು ಇಟ್ಟುಕೊಂಡು ನಿನ್ನೆ ಜಾರಿ ನಿರ್ದೇಶನಾಲಯಗೆ (ಇಡಿ) ದೂರು ಕೊಟ್ಟಿದ್ದೇನೆ. ಜೊತೆಗ, ಲೋಕಾಯುಕ್ತಕ್ಕೆ ದೂರು ಸಲ್ಲಿಕೆ ಮಾಡುತ್ತೇನೆ. ನಾನು ಯಾವುದೇ ಕಾರಣಕ್ಕೂ ಇಂತಹ ಆಮಿಷಕ್ಕೆ ಒಪ್ಪುವುದಿಲ್ಲ. ನಾನು ಜೀವಂತ ಆಗಿರುವುದರೊಳಗೆ ಇದಕ್ಕೊಂದು ತಾರ್ಕಿಕ ಅಂತ್ಯ ಹಾಡುತ್ತೇನೆ ಎಂದು ಸ್ನೇಹಮಯಿ ಕೃಷ್ಣ ಹೇಳಿದರು.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more