Aug 26, 2021, 5:22 PM IST
ಬೆಂಗಳೂರು, (ಆ.26): ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ನೀಡಿರುವ ಬೇಜವಾಬ್ದಾರಿ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.
ರೇಪ್ ಸಂತ್ರಸ್ತೆ ಅಷ್ಟೊತ್ತಿಗೆ ಆ ನಿರ್ಜನ ಪ್ರದೇಶಕ್ಕೆ ಹೋಗ್ಬಾರದಿತ್ತು: ಗೃಹ ಸಚಿವ ವಿವಾದಾತ್ಮಕ ಹೇಳಿಕೆ
ರೇಪ್ ನಡೆದಿದ್ದು ಅಲ್ಲಿ, ಕಾಂಗ್ರೆಸ್ ನವರು ನನ್ನ ಮೇಲೆ ರೇಪ್ ಮಾಡುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಡಿ.ಕೆ.ಶಿವಕುಮಾರ್, ಗೃಹ ಸಚಿವರಾಗಿ ಇಂತಹ ಬೇಜವಾಬ್ದಾರಿ ಹೇಳಿಕೆ ನೀಡುತ್ತಿರುವುದು ಖಂಡನೀಯ. 'ರೇಪ್' ಎಂಬ ಪದವನ್ನು ಗೃಹ ಸಚಿವರು ಬಹಳ ಗೌರವಯುತ ಎಂಬ ರೀತಿಯಲ್ಲಿ ಬಳಸುತ್ತಿದ್ದಾರೆ. ಸಚಿವರ ಈ ಪದ ತುಂಬಾ ಪ್ರಿಯವಾದ ಪದ. ಅದಕ್ಕೆ ಆ ಪದವನ್ನು ಸರಳ ಎಂಬಂತೆ ಬಳಸುತ್ತಿದ್ದಾರೆ. ಕಾಂಗ್ರೆಸ್ ನವರು ರೇಪ್ ಮಾಡುತ್ತಿದ್ದಾರೆ ಎಂದ ಮೇಲೆ ಯಾರು ರೇಪ್ ಮಾಡಿದ್ದಾರೆ ಅವರನ್ನು ಪೊಲೀಸರು ಬಂಧಿಸಿ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದರು.