ಮೋದಿ ನಾಲಾಯಕ್! ಮಲ್ಲಿಕಾರ್ಜುನ ಖರ್ಗೆ ಬೆನ್ನಲ್ಲೇ ವಿವಾದ ಸೃಷ್ಟಿಸಿದ ಮಗನ ಹೇಳಿಕೆ!

ಮೋದಿ ನಾಲಾಯಕ್! ಮಲ್ಲಿಕಾರ್ಜುನ ಖರ್ಗೆ ಬೆನ್ನಲ್ಲೇ ವಿವಾದ ಸೃಷ್ಟಿಸಿದ ಮಗನ ಹೇಳಿಕೆ!

Published : May 01, 2023, 07:15 PM IST

ಶಾಸಕ ಪ್ರಿಯಾಂಕ ಖರ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು 'ನಾಲಾಯಕ್' ಎಂದು ಮೂದಲಿಸುವ ಮೂಲಕ ಮತ್ತೊಂದು ವಿವಾದವನ್ನು ಖರ್ಗೆ ಕುಟುಂಬದ ಮೈಮೇಲೆ ಎಳೆದುಕೊಂಡಿದ್ದಾರೆ.

ಕಲಬುರಗಿ (ಮೇ 1): ಈಗಾಗಲೇ ಅಖಿಲ ಭಾರತ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ವಿಷ ಸರ್ಪ ಎಂದು ಹೇಳುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಈಗ ಅವರ ಪುತ್ರ ಶಾಸಕ ಪ್ರಿಯಾಂಕ ಖರ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು 'ನಾಲಾಯಕ್' ಎಂದು ಮೂದಲಿಸುವ ಮೂಲಕ ಮತ್ತೊಂದು ವಿವಾದವನ್ನು ಖರ್ಗೆ ಕುಟುಂಬದ ಮೈಮೇಲೆ ಎಳೆದುಕೊಂಡಿದ್ದಾರೆ.

ಈಗಾಗಲೇ ದೇಶದ ಪ್ರಧಾನಮಂತ್ರಿಗೆ ಅಪ್ಪ ವಿಷ ಸರ್ಪ ಎಮದು ಹೇಳಿದರೆ, ಈಗ ಮಗ ನಾಲಾಯಕ್ ಎಂದು ಹೇಳಿಕೆ ನೀಡಿದ್ದಾರೆ. ಸೋಮವಾರ ಬೆಳಗ್ಗೆ ಶಾಸಕ ಪ್ರಿಯಾಂಕ ಖರ್ಗೆ ಮಾಧ್ಯಮಗಳೊಂದಿಗೆ ಮಾತನಾಡುವಾಗ ಮೋದಿಯ ವಿರುದ್ಧ ಹರಿಹಾಯ್ದಿದ್ದಾರೆ. ಇತ್ತೀಚೆಗೆ ಮೋದಿ ಮಳಖೇಡಕ್ಕೆ ಬಂದಾಗ ಬಂಜಾರಾ ಸಮಾಜದವರಿಗೆ ಏನು ಹೇಳಿದ್ದರು? ಬಂಜಾರಾ ಸಮಾಜದ ಜನರ ಮಗ ದೆಹಲಿಯಲ್ಲಿದ್ದಾನೆ ಅಂತ ಮೋದಿ ಹೇಳಿದ್ದರು. ಆದರೆ, ಇಂತಹ ನಾಲಾಯಕ್ ಮಗನಿದ್ದರೆ ಹೇಗೆ ಜೀವನ ನಡೆಯುತ್ತೆ? ದೇಶ ನಡೆಸೋನು ಮಾತ್ರವಲ್ಲ. ಮನೆಲಿ ಒಬ್ಬ ನಾಲಾಯಕ್ ಮಗನಿದ್ದರೂ ಮನೆ ಸುಸೂತ್ರವಾಗಿ ನಡೆಯೋದಿಲ್ಲ. ಆದರೆ, ಸುದ್ದಿಗೋಷ್ಠಿಯ ಕೊನೆಗೆ ನಾನು ಮೋದಿಗೆ ಹಾಗೆ ಅಂದಿಲ್ಲ. ನನಗೆ ವಯಕ್ತಿಕ ನಿಂದನೆಗಿಂತ ಅವರಿಂದ ಕೆಲವು ಪ್ರಶ್ನೆಗೆ ಉತ್ತರ ಮುಖ್ಯ ಎಂದು ಸಮಜಾಯಿಸಿ ನೀಡಲು ಯತ್ನಿಸಿದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more