News Hour Special: ಯಾರಿಗೆಲ್ಲಾ ಯಾವ ಕಾರಣಕ್ಕೆ ಬಿಜೆಪಿ ಟಿಕೆಟ್‌ ತಪ್ಪಿಸಲಾಗಿದೆ ? ವಿಜಯೇಂದ್ರ ಹೇಳಿದ್ದೇನು?

News Hour Special: ಯಾರಿಗೆಲ್ಲಾ ಯಾವ ಕಾರಣಕ್ಕೆ ಬಿಜೆಪಿ ಟಿಕೆಟ್‌ ತಪ್ಪಿಸಲಾಗಿದೆ ? ವಿಜಯೇಂದ್ರ ಹೇಳಿದ್ದೇನು?

Published : Apr 14, 2024, 12:57 PM ISTUpdated : Apr 14, 2024, 08:41 PM IST

ಒಗ್ಗಟ್ಟಾಗಿ, ಒಂದಾಗಿ ಶ್ರಮ ವಹಿಸಿದರೆ ಎಲ್ಲಾ 28 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ಅಲ್ಲದೆ ಜನರೂ ಸಹ ಮೋದಿಯನ್ನು ಮತ್ತೊಮ್ಮೆ ಪ್ರಧಾನಿಯಾಗಿ ನೋಡಲು ಇಷ್ಟಪಡುತ್ತಿದ್ದಾರೆ ಎಂದು ವಿವರಿಸಿದ್ದಾರೆ.  
 

ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (BY vijayendra)ರಾಜ್ಯ ರಾಜಕಾರಣ ಬಗ್ಗೆ ತಮ್ಮದೇ ಆದ ಅಭಿಪ್ರಾಯ ಹೊರಹಾಕಿದ್ದಾರೆ. ನಮ್ಮ ಅಭ್ಯರ್ಥಿ ಸೋಲುತ್ತಾರೆ ಎನ್ನುವ ಯಾವುದೇ ಕ್ಷೇತ್ರಗಳು ಇಲ್ಲ. ನಮ್ಮ ಕಡೆಯಿಂದ ಯಾವುದೇ ತಪ್ಪಾಗದೆ , ಒಗ್ಗಟ್ಟಾಗಿ, ಒಂದಾಗಿ ಶ್ರಮ ವಹಿಸಿದರೆ ಎಲ್ಲಾ 28 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದಿದ್ದಾರೆ. ಹಾಗೆಯೇ ನಾನು ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದು, ಮತದಾರರ ನಾಡಿಮಿಡಿತವನ್ನು ಗಮನಿಸುತ್ತಿದ್ದೇನೆ. ಜನರಲ್ಲಿ ಮೋದಿ(Narendra Modi) ಅವರಿಗೆ ಮತ್ತೊಮ್ಮೆ ಅವಕಾಶ ಕೊಡಬೇಕು ಅನ್ನೋದು ಎಲ್ಲರ ಮನಸ್ಸಿನಲ್ಲಿ ಇದೆ ಎಂದಿದ್ದು, ಈಶ್ವರಪ್ಪ ಅವರ ವಿರೋಧದ ಬಗ್ಗೆ ಮಾತನಾಡಿ, ಎಲ್ಲಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಹಾಕುವ ನಿರ್ಧಾರವನ್ನು ದೆಹಲಿಯ ವರಿಷ್ಠರು ಮಾಡಿದ್ದಾರೆ. ಈಶ್ವರಪ್ಪ(KS Eshwarappa) ಹಿರಿಯರಿದ್ದಾರೆ, ಅವರೂ ಕೂಡ ಪಕ್ಷ ಕಟ್ಟುವ ಕೆಲಸ ಮಾಡಿದ್ದಾರೆ. ಆದರೆ,  ಯಾರೂ ಪಕ್ಷಕ್ಕೆ ದೀರ್ಘವಾಗಿ ದುಡಿದಿದ್ದಾರೋ ಅವರಿಗೆ ಹಾವೇರಿಯಲ್ಲಿ(Haveri) ಟಿಕೆಟ್‌ ನೀಡಲಾಗಿದೆ. ಹಾಗಂದ ಮಾತ್ರಕ್ಕೆ ಈಶ್ವರಪ್ಪ ಅವರ ಮಗ ಅಸಮರ್ಥರು ಎಂದು ಹೇಳಲಾಗುವುದಿಲ್ಲ. ನಮ್ಮ ರಾಷ್ಟ್ರೀಯ ನಾಯಕರು ಅವರದೇ ಆದ ಮಾನದಂಡಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್-ಬಿಜೆಪಿ ನಾಯಕರ ವಾಕ್ಸಮರ..! ಲೋಕಾ ಅಖಾಡದಲ್ಲಿ ಅಭ್ಯರ್ಥಿಗಳ ಏಟು-ಎದಿರೇಟು..!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!