Aug 26, 2022, 6:22 PM IST
ಕಾಂಗ್ರೆಸ್ ನಾಯಕ ಕೆಎಚ್ ಮುನಿಯಪ್ಪ ಹಾಗೂ ಆರೋಗ್ಯ ಸಚಿವ ಕೆ ಸುಧಾಕರ್ ಭೇಟಿ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸಿತ್ತು. ಇದರ ಬೆನ್ನಲ್ಲೇ ಸಚಿವ ಸುಧಾಕರ್ ಹಾಗೂ ಮುನಿಯಪ್ಪ ಭೇಟಿಯ ಕಾರಣಗಳನ್ನು ಬಹಿರಂಗಪಡಿಸಿದ್ದಾರೆ. ಮುನಿಯಪ್ಪ ಭೇಟಿ ಹಿಂದೆ ಯಾವುದೇ ರಾಜಕೀಯ ಕಾರಣ ಅಡಗಿಲ್ಲ ಎಂದ ಸುಧಾಕರ್, 7 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮುನಿಯಪ್ಪ ಅವರನ್ನು ಕಾಂಗ್ರೆಸ್ ನಡೆಸಿಕೊಂಡ ರೀತಿ ಸರಿಇಲ್ಲ ಎಂದು ಕುತೂಹಲ ಅಂಶವನ್ನು ಹೇಳಿದ್ದಾರೆ. ಇತ್ತ ಸ್ವತಃ ಮುನಿಯಪ್ಪ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಜೊತೆಗೆ ಇದ್ದೇನೆ, ಪಕ್ಷ ಬಿಡುವ ಪ್ರಶ್ನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.