Assembly election: ಲವ್‌ ಜಿಹಾದ್‌ ವಿರೋಧಿ ಕಾನೂನು ತರುವ ಚಿಂತನೆ ಇಲ್ಲ: ಸಿಎಂ ಸ್ಪಷ್ಟನೆ

Jan 4, 2023, 8:32 PM IST

ಬಳ್ಳಾರಿ (ಜ.04):  ಲವ್ ಜಿಹಾದ್ ಕಾನೂನು ತರುತ್ತೇವೆ ಎಂದು ಹೇಳಿಕೆ ನೀಡಿದ್ದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಆದರೆ, ಲವ್  ಜಿಹಾದ್ ಕಾನೂನು ತರುವ ಚಿಂತನೆ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಸವಾರಾಜ್ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. 

ನಳೀನ್ ಕುಮಾರ್ ಕಟೀಲ್ ಪಕ್ಷದ ನಿಲುವಿನಲ್ಲಿ ಹೇಳಿಕೆ ನೀಡಿದ್ದಾರೆ. ಅವರ ಬಳಿ ನಾನು ಚರ್ಚೆ ಮಾಡಿ ಸರ್ಕಾರದ ನಿಲುವು ತಿಳಿಸುವೆ. ಸದ್ಯಕ್ಕೆ ಲವ್ ಜಿಹಾದ್ ಕಾನೂನು ತರುವ ಚಿಂತನೆ ಸರ್ಕಾರದ ಮುಂದೆ ಇಲ್ಲ. ಅವರು ಯಾವ ವಿಚಾರದಲ್ಲಿ ಹೇಳಿಕೆ ನೀಡಿದ್ದಾರೆ ಎಂಬುದನ್ನು ನಾನು ಪರಿಶೀಲನೆ ನಡೆಸಿ ಹೇಳಿಕೆ ನೀಡುವೆ. ಅಲ್ಲಿವರೆಗೂ ಯಾವುದೇ ಗೊಂದಲ ಮಾಡಿಕೊಳ್ಳಬಾರದು. ಇನ್ನು ಸಿದ್ದರಾಮಯ್ಯ ಅವರು ಮಾತನಾಡಿರುವುದು ಅವರ ವ್ಯಕ್ತಿತ್ವವನ್ನು ತೋರಿಸುತ್ತದೆ. ಅವರಿಗೆ ಚುನಾವಣೆಯಲ್ಲಿ ಜನರೇ ತಕ್ಕ ಪಾಠವನ್ನು ಕಲಿಸಲಿದ್ದಾರೆ ಎಂದು ಸಿಎಂ ಬೊಮ್ಮಾಯಿ ತಿರುಗೇಟು ನೀಡಿದರು.