Party Rounds: ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿಯ ರಹಸ್ಯ! ಸಂಭಾವ್ಯ ಅಭ್ಯರ್ಥಿಗಳು ಯಾರು?

Mar 16, 2023, 8:28 PM IST

ಬೆಂಗಳೂರು (ಮಾ.16): ರಾಜ್ಯ ವಿಧಾನಸಭೆ ಚುನಾವಣೆಗೆ ಎಲ್ಲಾ ಪಕ್ಷಗಳು ಭರ್ಜರಿ ಸಿದ್ಧತೆಯನ್ನು ಮಾಡಿಕೊಳ್ಳುತ್ತಿವೆ. ಕೇಂದ್ರ ಚುನಾವಣಾ ಆಯೋಗ ಇನ್ನೇನು ಕೆಲವೇ ದಿನಗಳಲ್ಲಿ ಚುನಾವಣೆಯ ದಿನಾಂಕವನ್ನು ಪ್ರಕಟ ಮಾಡಲಿದೆ. 

ಈ ನಡುವೆ ರಾಜ್ಯ ಕಾಂಗ್ರೆಸ್‌ ಚುನಾವಣೆಯ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವ ಸನಿಹದಲ್ಲಿದೆ. ಶುಕ್ರವಾರ ಕಾಂಗ್ರೆಸ್‌ ಪಕ್ಷ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದು, ಯಾರಿಗೆಲ್ಲಾ ಟಿಕೆಟ್‌ ಸಿಗಲಿದೆ ಎನ್ನುವ ಕುತೂಹಲ ಹುಟ್ಟಿಕೊಂಡಿದೆ.

Party Rounds: ಊಹಾಪೋಹಗಳಿಗೆ ತೆರೆ ಎಳೆದ ಸೋಮಣ್ಣ! ಮಗನಿಗೂ ಬಿಜೆಪಿ ಟಿಕೆಟ್‌?

ಮೂಲಗಳ ಪ್ರಕಾರ, ಕಳೆದ ಬಾರಿ ಕಾಂಗ್ರೆಸ್‌ ಪಕ್ಷ ಸೋತ ಕ್ಷೇತ್ರಗಳಲ್ಲಿ ಟಿಕೆಟ್‌ ಫೈನಲ್‌ ಮಾಡಿ ಮೊದಲ ಲಿಸ್ಟ್‌ ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ನಡುವೆ ಟಿಕೆಟ್‌ ಪ್ರಕಟಗೊಂಡ ಬಳಿಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಸುದ್ದಿನ ಅಸಮಾಧಾನ ಹೊಗೆಯಾಡಬಹುದು ಎಂದೂ ಹೇಳಲಾಗಿದೆ.