Party Rounds: ಬಿಜೆಪಿ ಕಾರ್ಯಕರ್ತರಿಗೆ ಬೂತ್‌ ಗೆಲ್ಲಲು ಪ್ರಧಾನಿ ಮೋದಿ ರಾಜಕೀಯ ಪಾಠ!

Party Rounds: ಬಿಜೆಪಿ ಕಾರ್ಯಕರ್ತರಿಗೆ ಬೂತ್‌ ಗೆಲ್ಲಲು ಪ್ರಧಾನಿ ಮೋದಿ ರಾಜಕೀಯ ಪಾಠ!

Published : Apr 27, 2023, 08:23 PM IST

ಅಸೆಂಬ್ಲಿ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕ ಬಿಜೆಪಿ ಕಾರ್ಯಕರ್ತರೊಂದಿಗೆ ಗುರುವಾರ ವಿಡಿಯೋ ಮೂಲಕ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ಪ್ರತಿ ಬೂತ್‌ ಗೆದ್ದರೆ ಪಕ್ಷ ಗೆದ್ದಂತೆ, ಆದ್ದರಿಂದ ಪ್ರತಿ ಬೂತ್‌ ಗೆಲವಿಗೆ ಶ್ರಮ ವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕಾರ್ಯಕರ್ತರಿಗೆ ಕರೆ ನೀಡಿದರು.

ಬೆಂಗಳೂರು (ಏ.27): ಕಾಂಗ್ರೆಸ್‌ ಅಂದರೆ ಭ್ರಷ್ಟಾಚಾರ, ಸುಳ್ಳು, ಗ್ಯಾರಂಟಿ ರಹಿತ ಪಕ್ಷ, ಹಾಗಿರುವಾಗ ಕಾಂಗ್ರೆಸ್‌ನ ಗ್ಯಾರಂಟಿ ಘೋಷಣೆಯನ್ನು ಜನತೆ ನಂಬುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಸೆಂಬ್ಲಿ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕ ಬಿಜೆಪಿ ಕಾರ್ಯಕರ್ತರೊಂದಿಗೆ ಗುರುವಾರ ವಿಡಿಯೋ ಮೂಲಕ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ಪ್ರತಿ ಬೂತ್‌ ಗೆದ್ದರೆ ಪಕ್ಷ ಗೆದ್ದಂತೆ, ಆದ್ದರಿಂದ ಪ್ರತಿ ಬೂತ್‌ ಗೆಲವಿಗೆ ಶ್ರಮ ವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕಾರ್ಯಕರ್ತರಿಗೆ ಕರೆ ನೀಡಿದರು. 

ಪ್ರತಿ ಬೂತ್‌ನಲ್ಲಿ 10 ಪುರುಷರು ಹಾಗೂ 10 ಮಹಿಳಾ ಕಾರ್ಯಕರ್ತರ ತಂಡ ರಚಿಸಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಎಲ್ಲ ರೀತಿಯ ಅಭಿವೃದ್ಧಿ ಕೆಲಸಗಳ ಮಾಹಿತಿಯನ್ನು ಮೊಬೈಲ್‌ ಮತ್ತು ತಮ್ಮ ಡೈರಿಗಳಲ್ಲಿ ಸಿದ್ಧಪಡಿಸಿ ಪ್ರಚುರಪಡಿಸುವ ಬಗ್ಗೆ ರೂಪುರೇಷೆ ತಯಾರಿಸಬೇಕು. ಮನೆ ಮನೆ ಭೇಟಿ ವೇಳೆ ಮನೆಯ ಸದಸ್ಯರ ಕುಶಲೋಪರಿ ವಿಚಾರಿಸಿ ಮಕ್ಕಳ ಜತೆ ಮಾತನಾಡಬೇಕು. ನಂತರ ಸರ್ಕಾರದ ಸಾಧನೆಗಳ ಬಗ್ಗೆ ವಿವರಿಸಬೇಕು ಎಂದು ಪ್ರಧಾನಿ ಮೋದಿ ಸಲಹೆ ಮಾಡಿದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಾಗಿತ್ತು.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more