ಫೆಬ್ರವರಿಯಲ್ಲಿ 3 ಬಾರಿ ಪ್ರಧಾನಿ ಮೋದಿ ಕರ್ನಾಟಕ ಪ್ರವಾಸ, ಸೃಷ್ಟಿಯಾಗುತ್ತಾ ಹೊಸ ಇತಿಹಾಸ?

Jan 31, 2023, 11:06 PM IST

ಜನವರಿ ತಿಂಗಳಲ್ಲಿ ಎರಡು ಬಾರಿ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಆಗಮಿಸಿದ್ದಾರೆ. ಇದೀಗ ಫೆಬ್ರವರಿ ತಿಂಗಳಲ್ಲಿ ಮೂರು ಬಾರಿ ರಾಜ್ಯಕ್ಕೆ ಮೋದಿ ಆಗಮಿಸುತ್ತಿದ್ದಾರೆ. ಮೂರು ಸರ್ಕಾರಿ ಕಾರ್ಯಕ್ರಮಗಳಿಗಾಗಿ ಮೋದಿ ರಾಜ್ಯ ಪ್ರವಾಸ ಮಾಡುತ್ತಿದ್ದಾರೆ. ಫೆಬ್ರವರಿ 6ನೇ ತಾರೀಕು ತುಮಕೂರು ಜಿಲ್ಲೆಯ ಗುಬ್ಬಿಗೆ ಆಗಮಿಸುವ ಮೋದಿ, ಹೆಚ್‌ಎಎಲ್ ಹೆಲಿಕಾಪ್ಟರ್ ಉತ್ಪಾದನಾ ಘಟಕಕ್ಕೆ ಚಾಲನೆ ನೀಡಲಿದ್ದಾರೆ. ಫೆಬ್ರವರಿ 13ರಂದು ಬೆಂಗಳೂರಿನಲ್ಲಿ ಆಯೋಜನೆಗೊಳ್ಳುವ ಏರ್ ಶೋ ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸಲಿದ್ದಾರೆ. ಬಳಿಕ ಫೆಬ್ರವರಿ 27 ರಂದು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಮೋದಿ ಆಗಮಿಸುತ್ತಿದ್ದಾರೆ. ಮೋದಿ ಕಾರ್ಯಕ್ರಮ, ಕರ್ನಾಟಕ ಚುನಾವಣೆ ವಾಕ್ಸಮರ ಸೇರಿದಂತೆ ಇಂದಿನ ಪ್ರಮುಖ ಸುದ್ದಿಗಳ ವಿವರ ಇಲ್ಲಿವೆ.