ಕಾಂಗ್ರೆಸ್‌ ಬಂಡಾಯಗಾರರಿಗೆ ಶಾಕ್‌ : 24 ಅಭ್ಯರ್ಥಿಗಳ ಪ್ರಾಥಮಿಕ ಸದಸ್ಯತ್ವ ರದ್ದು

May 3, 2023, 2:46 PM IST

ಬೆಂಗಳೂರು: ಟಿಕೆಟ್‌ ಕೈ ತಪ್ಪಿದ್ದಕ್ಕೆ ಬಂಡಾಯವೆದ್ದಿದ್ದ 24 ಅಭ್ಯರ್ಥಿಗಳಿಗೆ ಕಾಂಗ್ರೆಸ್‌ ಶಾಕ್‌ ನೀಡಿದೆ. ಅವರ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವವನ್ನು ರದ್ದುಗೊಳಿಸಲಾಗಿದೆ. ಆರು ವರ್ಷಗಳ ಕಾಲ ಉಚ್ಛಾಟಣೆ ಮಾಡಿ, ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ಆದೇಶ ಹೊರಡಿಸಿದೆ. ಅಲ್ಲದೇ ಕಾಂಗ್ರೆಸ್‌ ಬಿಟ್ಟು ಪಕ್ಷೇತರರಾಗಿ ಸ್ಪರ್ಧಿಸಿರುವ ಎಲ್ಲಾರ ಪ್ರಾಥಮಿಕ ಸದಸ್ಯತ್ವವನ್ನು ಕಿತ್ತುಕೊಳ್ಳಲಾಗಿದೆ.  ಈ 24 ಅಭ್ಯರ್ಥಿಗಳಲ್ಲದೇ ಬೇರೆ ಯಾರಾದ್ರೂ ಪಕ್ಷದ ಅಭ್ಯರ್ಥಿಗಳ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಿದ್ರೆ, ಅವರಿಗೂ ಈ ಉಚ್ಛಾಟನೆ ಆದೇಶ ಅನ್ವಯಿಸಲಿದೆ. ಅಲ್ಲದೇ ಇವರ ಜೊತೆ ಪ್ರಚಾರದಲ್ಲಿ ಭಾಗವಹಿಸಿದರೆ, ಅಂಥವರ ವಿರುದ್ಧವೂ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಮಿತಿ ತಿಳಿಸಿದೆ.