Priyank Kharge on Central Govt: ಜಲಜೀವನ್ ಮಿಷನ್ 3600 ಕೋಟಿ ಕೇಂದ್ರ ಕೊಡಬೇಕಿತ್ತು | Suvarna News

Published : Feb 22, 2025, 07:01 PM IST

ಮಂಗಳೂರಿನಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಸತೀಶ್ ಜಾರಕಿಹೊಳಿ ಅವರ ಮುಖ್ಯಮಂತ್ರಿ ರೇಸ್‌ನಲ್ಲಿ ಡಿಕೆ ಶಿವಕುಮಾರ್ ಇದ್ದಾರೆಂಬ ಹೇಳಿಕೆಗೆ ಪ್ರತಿಕ್ರಿಯಿಸಿ, ಮಾಧ್ಯಮದಲ್ಲಿ ಹೇಳಿಕೆ ಕೊಟ್ಟರೆ ಸಚಿವರ ಬದಲಾವಣೆಯಾಗುವುದಿಲ್ಲ ಎಂದರು. ಸದ್ಯಕ್ಕೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಗಳು ಮತ್ತು ಡಿಕೆ ಶಿವಕುಮಾರ್ ಉಪ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರು. ಎಐಸಿಸಿಯವರು ಎಲ್ಲಾ ಮಂತ್ರಿಗಳತ್ರ ರಿಪೋರ್ಟ್ ಕಾರ್ಡ್ ತೆಗೆದುಕೊಂಡಿದ್ದಾರೆ. ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಗಳನ್ನು ಎಷ್ಟು ಈಡೇರಿಸಿದ್ದೀರಾ, ಯಾವ ಹೊಸ ನೀತಿಗಳನ್ನು ತಂದಿದ್ದೀರಾ, ಎಷ್ಟು ಅನುದಾನವನ್ನು ತಂದಿದ್ದೀರಾ ಎನ್ನುವ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಡಿಕೆ ಶಿವಕುಮಾರ್ ಮುಂದಿನ ಚುನಾವಣೆ ನನ್ನ ನೇತೃತ್ವದಲ್ಲೇ ಎಂದು ಹೇಳಿಕೆ ನೀಡಿದ ವಿಚಾರಕ್ಕೆ ಉತ್ತರಿಸಿ, ನಾವು ಸಾಮೂಹಿಕ ನಾಯಕತ್ವದಲ್ಲೇ ಹೋಗುತ್ತಿದ್ದೇವೆ. ಕೆಪಿಸಿಸಿ ಅಧ್ಯಕ್ಷ ಬದಲಾವಣೆಗೆ ಎಐಸಿಸಿಯಲ್ಲಿ ಯಾವುದೇ ಚರ್ಚೆಗಳು ನಡೆದಿಲ್ಲ. ಡಿಕೆ ಶಿವಕುಮಾರ್ ಹೈಕಮಾಂಡ್ ಭೇಟಿಯಾಗುವುದರಲ್ಲಿ ತಪ್ಪೇನಿಲ್ಲ, ನಾವು ಕಾಂಗ್ರೆಸ್ ಹೈ ಕಮಾಂಡ್ ಭೇಟಿ ಮಾಡದೆ ಕೇಶವ ಕೃಪಕ್ಕೆ ಭೇಟಿ ನೀಡಲು ಸಾಧ್ಯವಿಲ್ಲ ಎಂದರು. ಗ್ಯಾರಂಟಿ ಯೋಜನೆಗಳಿಗೆ ಅನುದಾನದ ಕೊರತೆ ವಿಚಾರಕ್ಕೆ ಬಿಜೆಪಿಯವರ ಆರೋಪಕ್ಕೆ ಕಿಡಿಕಾರಿದ ಅವರು, ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಎಷ್ಟು ಅನುದಾನ ಬಿಡುಗಡೆ ಮಾಡಿದ್ದಾರೆ ಎಂದು ಮೊದಲು ಉತ್ತರಿಸಲಿ. ಜಲಜೀವನ್ ಮಿಷನ್‌ನಲ್ಲಿ ಕೇಂದ್ರ ಸರ್ಕಾರ 3600 ಕೋಟಿ ಕೊಡಬೇಕಿತ್ತು, ಆದರೆ ಬಂದಿರುವುದು ಕೇವಲ 517 ಕೋಟಿ. ನಮಗೇ ತೆರಿಗೆ ಜಿಎಸ್ಟಿ ಪಾವತಿಯಲ್ಲಿ ಕೇಂದ್ರ ಅನ್ಯಾಯ ಮಾಡುತ್ತಿದೆ. ಗೃಹಲಕ್ಷ್ಮಿ ಯೋಜನೆ ಹಣ ನೀಡಲು ವಿಳಂಬವಾಗುತ್ತಿರುವುದು ನಿಜ, ಆದರೆ ಈ ವಾರದಲ್ಲಿ ಹಣ ಪಾವತಿಯಾಗುತ್ತದೆ ಎಂದು ಹೇಳಿದರು. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more