ಕ್ಷೇತ್ರ ಬದಲಾವಣೆ, ಸೋಲಿನ ಭೀತಿಯೋ, ಗೆಲುವಿನ ಲೆಕ್ಕಾಚಾರವೋ! ಅಮೇಥಿ, ರಾಯ್‌ಬರೇಲಿ ರಾಜಕೀಯ ಇತಿಹಾಸವೇನು?

ಕ್ಷೇತ್ರ ಬದಲಾವಣೆ, ಸೋಲಿನ ಭೀತಿಯೋ, ಗೆಲುವಿನ ಲೆಕ್ಕಾಚಾರವೋ! ಅಮೇಥಿ, ರಾಯ್‌ಬರೇಲಿ ರಾಜಕೀಯ ಇತಿಹಾಸವೇನು?

Published : May 04, 2024, 10:00 AM IST

ಅಮೇಥಿಯಿಂದ ಸ್ಪರ್ಧಿಸಲು ಗಾಂಧಿ ಕುಟುಂಬ ನಿರಾಸಕ್ತಿ..? 
ಅಮೇಥಿಯಿಂದ ದೂರ ಸರಿದಿದ್ದು ಯಾಕೆ ರಾಹುಲ್ ಗಾಂಧಿ..?
ಕಾಂಗ್ರೆಸ್ ಭದ್ರಕೋಟೆಯನ್ನು ಉಳಿಸಿಕೊಳ್ಳಲು ಕೈ ಕಸರತ್ತು..!

ಲೋಕಸಭೆ ಚುನಾವಣೆ ಕಾವು ರಂಗೇರಿದೆ. ಅದ್ರಲ್ಲೂ ಇಷ್ಟುದಿನ ಅಮೇಥಿ-ರಾಯ್‌ಬರೇಲಿಯಿಂದ(Raebareli) ಕಾಂಗ್ರೆಸ್‌ನ ಯಾರು ಸ್ಪರ್ಧೆ ಮಾಡ್ತಾರೆ ಅನ್ನೋ ಕುತೂಹಲ ಮನೆ ಮಾಡಿತ್ತು. ಆದ್ರೆ ಆ ಕುತೂಹಲಕ್ಕೆ ತೆರೆ ಬಿದ್ದಿದೆ. ರಾಯ್‌ಬರೇಲಿಯಿಂದ ರಾಹುಲ್ ಗಾಂಧಿಯೇ (Rahul Gandhi) ಕಣಕ್ಕಿಳಿದಿದ್ದಾರೆ. ಇಷ್ಟು ದಿನ ಅಮೇಥಿಯಿಂದ(Amethi) ಸ್ಪರ್ಧಿಸುತ್ತಾರೆಂಬ ಮಾತುಗಳು ಕೇಳಿ ಬರ್ತಿತ್ತು. ಈ ಬೆನ್ನಲ್ಲೆ ರಾಹುಲ್ ರಾಯ್‌ಬರೇಲಿಯಿಂದ ಸ್ಪರ್ಧೆಗೆ ಮುಂದಾಗಿದ್ದಾರೆ. ದೇಶದಲ್ಲಿ ಲೋಕಸಭೆ ಚುನಾವಣೆಯ(Lok Sabha elections 2024) ಕಾವು ರಂಗೇರುತ್ತಿದ್ದು, ಅಭ್ಯರ್ಥಿಗಳ ಗೆಲುವಿನ ಲೆಕ್ಕಾಚಾರದ ಜೊತೆಗೆ ಹೈವೋಲ್ಟೇಜ್ ಕ್ಷೇತ್ರಗಳ ಕುರಿತ ಚರ್ಚೆ ಜೋರಾಗಿದೆ. ಅಮೇಥಿ-ರಾಯ್‌ಬರೇಲಿ ಈ ಎರಡೂ ಕ್ಷೇತ್ರಗಳು ಈ ಬಾರಿ ಅತಿ ಹೆಚ್ಚು ಸದ್ದು ಮಾಡ್ತಿದೆ. ಇವು ಕಾಂಗ್ರೆಸ್‌ನ(Congress) ಭದ್ರಕೋಟೆ ಎಂದೇ ಜನಪ್ರಿಯತೆಯನ್ನ ಪಡೆದುಕೊಂಡ ಕ್ಷೇತ್ರಗಳು. ಇಷ್ಟು ದಿನ ಅಮೇಥಿ, ರಾಯ್‌ಬರೇಲಿಯಿಂದ ಯಾರು ಸ್ಪರ್ಧೆ ಮಾಡ್ತಾರೆ ಅನ್ನೋ ಕುತೂಹಲವಿತ್ತು. ಅದ್ರಲ್ಲೂ ಕಾಂಗ್ರೆಸ್ ಹೈಕಮಾಂಡ್ ತುಂಬಾ ತಲೆ ಕೆಡಿಸಿಕೊಂಡಿದ್ದ ಕ್ಷೇತ್ರಗಳಿವು. ಮೊದಲೇ ಹೇಳಿದಂತೆ ಇವೆರಡು ಕಾಂಗ್ರೆಸ್‌ನ ಭದ್ರಕೋಟೆ. ಆದ್ರೆ ಕಳೆದ ಬಾರಿಯ ಚುನಾವಣೆಯಲ್ಲಿ ಸ್ಮೃತಿ ಇರಾನಿ ವಿರುದ್ಧ ರಾಹುಲ್‌ ಗಾಂಧಿ ಅಮೇಥಿಯಲ್ಲಿ ಸೋಲಬೇಕಾಯ್ತು. ಇದೇ ಕಾರಣಕ್ಕೆ ಈ ಬಾರಿಯ ಚುನಾವಣೆಯಲ್ಲಿ ಕಳೆದುಕೊಂಡ ಭದ್ರಕೋಟೆಯನ್ನು ಮತ್ತೆ ವಶಪಡೆಸಿಕೊಳ್ಳಲು ಅಮೇಥಿಯಿಂದ ರಾಹುಲ್‌ ಗಾಂಧಿ ಸ್ಪರ್ಧೆ ಮಾಡ್ತಾರೆ ಅನ್ನೋ ಸುದ್ದಿ ಕೂಡ ಇತ್ತು. ಆದ್ರೆ ಕೊನೇ ಕ್ಷಣದಲ್ಲಿ ಕಾಂಗ್ರೆಸ್ ದೊಡ್ಡ ಟ್ವಿಸ್ಟ್ ಕೊಟ್ಟಿದೆ. ಈ ಎರಡೂ ಕ್ಷೇತ್ರಗಳಿಂದ ಸ್ಪರ್ಧಿಸುತ್ತಿರುವ ತನ್ನ ಅಭ್ಯರ್ಥಿಯನ್ನು ಕಾಂಗ್ರೆಸ್ ಘೋಷಿಸಿದೆ.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಒತ್ತಡವಿದ್ದು, ಅತಿಯಾದ ವ್ಯಯ ಇರಲಿದೆ..

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more