Mar 23, 2023, 1:14 PM IST
ಆನೇಕಲ್ (ಮಾ.23): ಬಾ ನಲ್ಲೆ ಮಧುಚಂದ್ರಕೆ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಭರವಸೆ ಮೂಡಿಸಿದ್ದ ಕೆ.ಶಿವರಾಮ್ ವೃತ್ತಿಯಲ್ಲಿ ಐಎಎಸ್ ಅಧಿಕಾರಿಯಾಗಿದ್ದರು. ನಂತರ ವಸಂತ ಕಾವ್ಯ ,ಸಾಂಗ್ಲಿಯಾನ 3 ಖಳ ನಾಯಕ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿಯೇ ಐಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾದ ಮೊದಲ ಕನ್ನಡಿಗರು ಶಿವರಾಮ್. 2013ರಲ್ಲಿ ನಿವೃತ್ತಿಯ ನಂತರ ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯ ಜೀವನ ಆರಂಭಿಸಿದರು. 2014ರಲ್ಲಿ ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿ ಸೋತರು. ನಂತರ ಅದೇ ವರ್ಷ ದಲಿತರಿಗೆ ಸಿ.ಎಂ ಪಟ್ಟ ಸಿಗಬೇಕೆಂದು ಪರಮೇಶ್ವರ್ ಬೆಂಬಲಿಸಿ ಕಾಂಗ್ರೆಸ್ ಸೇರಿದರು. ಆದರೆ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಗದೇ ಬಿಜೆಪಿ ಸೇರಿದರು. ಛಲವಾದಿ ಮಹಸಭಾ ಅಧ್ಯಕ್ಷರಾಗಿದ್ದರು. ದಲಿತ ಪರ ಹೋರಾಟಕ್ಕೆ ಹೆಸರುವಾಸಿಯಾದ ಇವರು ಆಡಳಿತ- ಸಿನಿಮಾ- ರಾಜಕೀಯ ಎಲ್ಲಾ ಕ್ಷೇತ್ರಗಳಲ್ಲಿ ಪಾರದರ್ಶಕ ಸೇವೆನೀಡಿ, ಬಡವರ ಬಂಧು ಎನಿಸಿಕೊಂಡಿದ್ದಾರೆ.