ಪ್ರತಿಷ್ಠೆಯ ಕಣವಾಗಿರುವ ಆರ್.ಆರ್.ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಶಾಂತಿಯುತವಾಗಿ ಮುಕ್ತಾಯಗೊಂಡ ಬಳಿಕ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್, ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.
ಬೆಂಗಳೂರು (ನ. 05): ಪ್ರತಿಷ್ಠೆಯ ಕಣವಾಗಿರುವ ಆರ್.ಆರ್.ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಶಾಂತಿಯುತವಾಗಿ ಮುಕ್ತಾಯಗೊಂಡ ಬಳಿಕ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್, ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.
ಮೂರು ಪಕ್ಷಗಳು ಸೇರಿದಂತೆ ಪಕ್ಷೇತರರಿಗೂ ಮತಗಳು ಹಂಚಿಕೆಯಾಗಿರುವ ಬಗ್ಗೆ ಚರ್ಚೆಗಳು ಆರಂಭಗೊಂಡಿವೆ. ಮತದಾರರನ್ನು ಸೆಳೆಯುವಲ್ಲಿ ಎಡವಿರುವ ಬಗ್ಗೆ ಕಾರ್ಯತಂತ್ರ ರೂಪಿಸಿರುವುದು ಸೇರಿದಂತೆ ಇತರೆ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲಾಗುತ್ತಿದೆ. ಪಕ್ಷದ ಅಭ್ಯರ್ಥಿಗಳ ಚಿತ್ತ ಫಲಿತಾಂಶದತ್ತ ನೆಟ್ಟಿದ್ದು, ಗೆಲುವು-ಸೋಲಿನ ಆತಂಕ ಪ್ರಾರಂಭವಾಗಿದೆ.