ರಾಜ್ಯಸಭಾ ಚುನಾವಣೆ: ಬಿಜೆಪಿ ಮೂರನೇ ಅಭ್ಯರ್ಥಿಯಾಗಿ ಲೆಹರ್‌ ಸಿಂಗ್ ಕಣಕ್ಕೆ, ಕುತೂಹಲ

ರಾಜ್ಯಸಭಾ ಚುನಾವಣೆ: ಬಿಜೆಪಿ ಮೂರನೇ ಅಭ್ಯರ್ಥಿಯಾಗಿ ಲೆಹರ್‌ ಸಿಂಗ್ ಕಣಕ್ಕೆ, ಕುತೂಹಲ

Published : May 31, 2022, 11:22 AM IST

ರಾಜ್ಯಸಭಾ ಚುನಾವಣೆಯ ನಾಲ್ಕನೇ ಸ್ಥಾನಕ್ಕೆ ಬಿಜೆಪಿಯೂ ತನ್ನ ಅಧಿಕೃತ ಅಭ್ಯರ್ಥಿಯನ್ನಾಗಿ ಪಕ್ಷದ ಮುಖಂಡ ಲೆಹರ್‌ಸಿಂಗ್‌ ಸಿರೋಯ ಅವರನ್ನು ಘೋಷಿಸಿದ್ದು, ಕಣ ರಂಗೇರಿದಂತಾಗಿದೆ. ವಿಧಾನಸಭೆಯ ಸಂಖ್ಯಾಬಲದ ಆಧಾರದ ಮೇಲೆ ಎರಡು ಸ್ಥಾನಗಳು ನಿರಾಯಾಸವಾಗಿ ಲಭಿಸುವುದರಿಂದ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮತ್ತು ಚಿತ್ರನಟ ಜಗ್ಗೇಶ್‌ ಅವರನ್ನು ಅಭ್ಯರ್ಥಿಗಳನ್ನಾಗಿ ಭಾನುವಾರವೇ ಘೋಷಿಸಿತ್ತು. ಇದೀಗ ಮೂರನೇ ಸ್ಥಾನವನ್ನೂ ಗೆಲ್ಲುವ ಕಸರತ್ತು ನಡೆಸಲು ಮುಂದಾಗಿದೆ. ಬಿಜೆಪಿಯ ಮೂವರೂ ಅಭ್ಯರ್ಥಿಗಳು ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ.

ಬೆಂಗಳೂರು, (ಮೇ.31): ರಾಜ್ಯಸಭಾ ಚುನಾವಣೆಯ ನಾಲ್ಕನೇ ಸ್ಥಾನಕ್ಕೆ ಬಿಜೆಪಿಯೂ ತನ್ನ ಅಧಿಕೃತ ಅಭ್ಯರ್ಥಿಯನ್ನಾಗಿ ಪಕ್ಷದ ಮುಖಂಡ ಲೆಹರ್‌ಸಿಂಗ್‌ ಸಿರೋಯ ಅವರನ್ನು ಘೋಷಿಸಿದ್ದು, ಕಣ ರಂಗೇರಿದಂತಾಗಿದೆ. ವಿಧಾನಸಭೆಯ ಸಂಖ್ಯಾಬಲದ ಆಧಾರದ ಮೇಲೆ ಎರಡು ಸ್ಥಾನಗಳು ನಿರಾಯಾಸವಾಗಿ ಲಭಿಸುವುದರಿಂದ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮತ್ತು ಚಿತ್ರನಟ ಜಗ್ಗೇಶ್‌ ಅವರನ್ನು ಅಭ್ಯರ್ಥಿಗಳನ್ನಾಗಿ ಭಾನುವಾರವೇ ಘೋಷಿಸಿತ್ತು. ಇದೀಗ ಮೂರನೇ ಸ್ಥಾನವನ್ನೂ ಗೆಲ್ಲುವ ಕಸರತ್ತು ನಡೆಸಲು ಮುಂದಾಗಿದೆ. ಬಿಜೆಪಿಯ ಮೂವರೂ ಅಭ್ಯರ್ಥಿಗಳು ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ.

ರಾಜ್ಯಸಭಾ ಚುನಾವಣಾ ಕಣಕ್ಕೆ 6 ಅಭ್ಯರ್ಥಿಗಳು; ಲೆಕ್ಕಾಚಾರ ಉಲ್ಟಾ ಮಾಡಿದ ಸಿದ್ದರಾಮಯ್ಯ!

ಒಟ್ಟು ನಾಲ್ಕು ಸ್ಥಾನಗಳ ಪೈಕಿ ಬಿಜೆಪಿ ಎರಡು ಮತ್ತು ಕಾಂಗ್ರೆಸ್‌ ಒಂದು ಸ್ಥಾನವನ್ನು ಸುಲಭವಾಗಿ ಜಯಿಸಲಿವೆ. ನಾಲ್ಕನೇ ಸ್ಥಾನ ಗೆಲ್ಲಲು ಇತರ ಪಕ್ಷದ ಮತಗಳ ಬೆಂಬಲ ಅಗತ್ಯವಾಗಲಿದೆ. ಅಗತ್ಯ ಮತಗಳ ಬಲ ಇಲ್ಲದಿದ್ದರೂ ಕಾಂಗ್ರೆಸ್‌ ಪಕ್ಷ ಸೋಮವಾರಷ್ಟೇ ತನ್ನ ಎರಡನೇ ಅಭ್ಯರ್ಥಿಯನ್ನಾಗಿ ಮನ್ಸೂರ್‌ ಖಾನ್‌ ಅವರನ್ನು ಕಣಕ್ಕಿಳಿಸಿತ್ತು. ಮಂಗಳವಾರ ಜೆಡಿಎಸ್‌ ಕೂಡ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕಿಳಿಸಲಿದೆ. ಇದೀಗ ಬಿಜೆಪಿ ಅಭ್ಯರ್ಥಿ ಕೂಡ ಅಖಾಡ ಪ್ರವೇಶಿಸಲಿದ್ದಾರೆ. ಅಲ್ಲಿಗೆ ನಾಲ್ಕನೇ ಸ್ಥಾನಕ್ಕೆ ಮೂರೂ ಪ್ರಮುಖ ರಾಜಕೀಯ ಪಕ್ಷಗಳಿಂದ ಅಭ್ಯರ್ಥಿಗಳು ಕಣಕ್ಕಿಳಿದಂತಾಗಲಿದ್ದು, ಯಾರು ಯಾವ ಪಕ್ಷದ ಮತಗಳನ್ನು ಸೆಳೆಯಲಿದ್ದಾರೆ ಎಂಬುದು ಕುತೂಹಲಕರವಾಗಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more