ಪ್ರಚಾರಕ್ಕಾಗಿ ಯೋಗೇಶ್ವರ್ ಹೀಗೆ ಮಾತನಾಡಿದ್ದರೆ: ಸಾ ರಾ ಮಹೇಶ್

Jul 30, 2020, 5:53 PM IST

ಬೆಂಗಳೂರು(ಜು.30): ಮೈತ್ರಿ ಸರ್ಕಾರ ಉರುಳಿಸುವಲ್ಲಿ ಸಿ.ಪಿ. ಯೋಗೇಶ್ವರ್ ಮಹತ್ವದ ಪಾತ್ರ ವಹಿಸಿದ್ದಾರೆ. ಮೊನ್ನೆಯಷ್ಟೇ ವಿಧಾನಪರಿಷತ್ ಸದಸ್ಯರಾಗಿದ್ದಾರೆ. ಸ್ವಲ್ಪ ಪ್ರಚಾರದಲ್ಲಿರಲು ಇಂತಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಮಾಜಿ ಸಚಿವ ಸಾ. ರಾ. ಮಹೇಶ್ ಹೇಳಿದ್ದಾರೆ.

ಶಾಸಕ ಸಿ.ಪಿ ಯೋಗೇಶ್ವರ್ ಮಾಜಿ ಸಿಎಂ ಕುಮಾರಸ್ವಾಮಿ ಪರೋಕ್ಷವಾಗಿ ನಮ್ಮ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ ಎನ್ನುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಾ ರಾ ಮಹೇಶ್, ಪ್ರಚಾರಕ್ಕಾಗಿ ಇಂತಹ ಮಾತುಗಳನ್ನಾಡಿದ್ದಾರೆ ಎಂದಿದ್ದಾರೆ.

ಯೋಗೇಶ್ವರ್ ಮಾತು ಭೂತದ ಬಾಯಲ್ಲಿ ಭಗವದ್ಗೀತೆಯಂತೆ: ಶರವಣ

ಕಾಂಗ್ರೆಸ್ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದ್ದರೂ ಸಂಕಷ್ಟದ ಸಮಯದಲ್ಲಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎನ್ನುವ ಕಾರಣದಿಂದ ಇದನ್ನು ಹೆಚ್ಚು ವಿವಾದಕ್ಕೀಡಾಗುವಂತೆ ಮಾಡುತ್ತಿಲ್ಲ ಎಂದು ಮಹೇಶ್ ಹೇಳಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.