ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ: ಡಿಕೆಶಿ, ಸಿದ್ದರಾಮಯ್ಯ ಸೇರಿ ಕಾಂಗ್ರೆಸ್‌ ನಾಯಕರು ಪೋಲಿಸ್ ವಶ

Apr 14, 2022, 5:04 PM IST

ಬೆಳಗಾವಿ, (ಏ.14): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜಕೀಯದಲ್ಲಿ ಅಲ್ಲೋಲ-ಕಲ್ಲೋಲ ಸೃಷ್ಟಿಸಿದೆ. ಸಚಿವ ಕೆ.ಎಸ್ ಈಶ್ವರಪ್ಪ ಅವರನ್ನ ಬಂಧಿಸಬೇಕೆಂದು ಕಾಂಗ್ರೆಸ್ ಬಿಗಿಪಟ್ಟು ಹಿಡಿದಿದೆ.

ಸಿಡಿ ಕೇಸ್​​​​​​​​​​​​​​​​​​ನಲ್ಲಿದ್ದ ಮಹಾನಾಯಕನ ತಂಡ ಸಂತೋಷ್​ ಕೇಸ್​ನಲ್ಲೂ ಇದೆ, ಗಂಭೀರ ಆರೋಪ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣವಾಗಿರುವ ಸಚಿವ ಕೆ.ಎಸ್ ಈಶ್ವರಪ್ಪ ಬಂಧನಕ್ಕೆ ಒತ್ತಾಯಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಾಯಕರು ಯತ್ನಿಸಿದ್ದಾರೆ. ಆದ್ರೆ, ಪೊಲೀಸರು ಪ್ರತಿಭಟನೆಯನ್ನು ತಡೆದು,   ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಮತ್ತು ರಾಜ್ಯ ಉಸ್ತುವಾರಿ ವಹಿಸಿರುವ ರಣದೀಪ್ ಸಿಂಗ್ ಸುರ್ಜೇವಾಲ ಸೇರಿ ನೂರಾರು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.