ಡಿಕೆಶಿ ಸೇನಾಪತಿ ಹುದ್ದೆ ಮೇಲೆ ಕಣ್ಣಿಟ್ಟ ಸಿದ್ದರಾಮಯ್ಯ ಬಣ; ಇಲ್ಲಿದೆ ರಾಜಕೀಯ ಒಳಸಂಚು!

ಡಿಕೆಶಿ ಸೇನಾಪತಿ ಹುದ್ದೆ ಮೇಲೆ ಕಣ್ಣಿಟ್ಟ ಸಿದ್ದರಾಮಯ್ಯ ಬಣ; ಇಲ್ಲಿದೆ ರಾಜಕೀಯ ಒಳಸಂಚು!

Published : Nov 29, 2024, 01:00 PM IST

ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಾಯಕತ್ವದಲ್ಲಿ ಪಕ್ಷವು ಉಪಚುನಾವಣೆಗಳಲ್ಲಿ ಗೆಲುವು ಸಾಧಿಸಿದೆ. ಶಿವಕುಮಾರ್ ಅವರ ಅಧ್ಯಕ್ಷ ಸ್ಥಾನದ ಬದಲಾವಣೆಯ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಸಚಿವ ಸಂಪುಟದ ಪುನಾರಚನೆಯ ಸಾಧ್ಯತೆಗಳೊಂದಿಗೆ ಈ ಚರ್ಚೆಗಳು ಮತ್ತಷ್ಟು ಗರಿಗೆದರಿವೆ.

ಕರುನಾಡ ಕಾಂಗ್ರೆಸ್‌ಗೆ ಅವರೇ ಸೇನಾಪತಿ. ಅವರ ಹೆಗಲಿಗೆ ಕೈ ಪಕ್ಷದ ಜವಾಬ್ದಾರಿ ಹೋದ ಕ್ಷಣದಿಂದ ಕಾಂಗ್ರೆಸ್ ಹಿಂತಿರುಗಿ ನೋಡಿದ್ದೇ ಇಲ್ಲ. ರಾಜ್ಯಾಧ್ಯಕ್ಷ ಪಟ್ಟದ ಮೇಲೆ ಕೂತು ಎಲೆಕ್ಷನ್ ರಣಕಣದಲ್ಲಿ ಸಾಲು ಸಾಲು ಗೆಲುವು ತಂದು ಕೊಟ್ಟವರು ಅವರು. ಆದರೀಗ ಅದೇ ಅಧ್ಯಕ್ಷ ಪಟ್ಟ ಬಿಟ್ಟು ಕೊಡ್ತಾರಾ ಪ್ರಚಂಡ ಸೇನಾಪತಿ ಎಂಬ ಚರ್ಚೆಗಳು ಶುರುವಾಗಿವೆ. ಡಿ.ಕೆ. ಶಿವಕುಮಾರ್ ಅವರು ತ್ಯಾಗದ ಮಾತನಾಡಿ, ಯಾರನ್ನ ಟಾರ್ಗೆಟ್ ಮಾಡ್ಕೊಂಡು ಬಾಣ ಬಿಟ್ಟಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

ರಾಜ್ಯದಲ್ಲಿ ಮೂರು ವಿಧಾನಸಭೆಗಳಲ್ಲಿ ನಡೆದ ಉಪ ಚುನಾವಣೆಯನ್ನು ಕಾಂಗ್ರೆಸ್ ಗೆದ್ದು ಬೀಗಿದೆ. ಇಲ್ಲಿಗೆ ಎಲ್ಲಾ ಸವಾಲು ಮುಗಿದಿಲ್ಲ, ಅಸಲಿಗೆ ಸದ್ಯದಲ್ಲಿಯೇ ಮತ್ತೊಂದು ಸವಾಲು ಎದುರಾಗಿದೆ. ಆ ಸವಾಲೇ ಡಿ.ಕೆ.ಶಿವಕುಮಾರ್ ಅವರ ಕುರ್ಚಿಯನ್ನೇ ಸೇಫ್ ಮಾಡಬಹುದು ಎನ್ನಲಾಗುತ್ತಿದೆ. ಹೀಗಾಗಿ, ಕೆಪಿಸಿಸಿ ಅಧ್ಯಕ್ಷರೇ ಬದಲಾಗುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ, ಸದ್ಯಕ್ಕೆ ಅಧ್ಯಕ್ಷರ ಬದಲಾವಣೆ ಡೌಟ್ ಅಂತಲೇ ಹೇಳಲಾಗುತ್ತಿದೆ. ಏಕೆಂದರೆ, ಈಗಾಗಲೇ ಅನೇಕ ಸವಾಲುಗಳನ್ನ ರಾಜ್ಯಾಧ್ಯಕ್ಷರಾಗಿ ಡಿಕೆಶಿ ಮೆಟ್ಟಿ ನಿಂತಿದ್ದಾರೆ. ಮುಂದಿರೋ ಮತ್ತೊಂದು ಸವಾಲನ್ನು ಸಹ ಅವರ ನೇತೃತ್ವದಲ್ಲಿಯೇ ಎದುರಿಸೋಣ ಎನ್ನುವ ತೀರ್ಮಾನವನ್ನ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳಬಹುದು.

ಇದರ ಜೊತೆಗೆ ಸರ್ಕಾರದಲ್ಲಿ ಸಚಿವ ಸಂಪುಟ ಬದಲಾವಣೆ ಚರ್ಚೆ ಶುರುವಾಗುತ್ತಿದೆ. ಇದರೊಂದಿಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾತು ಸಹ ಬರ್ತಿದೆ. ಇಲ್ಲಿ ಸಿದ್ದರಾಮಯ್ಯ ಬಣ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯೋ ಪ್ಲಾನ್ ಮಾಡಿದೆ ಅನ್ನೋ ಅನುಮಾನ ರಾಜಕೀಯ ವಲಯದಲ್ಲಿ ವ್ಯಕ್ತವಾಗುತ್ತಿದೆ. ಸಿಎಂ, ಡಿಸಿಎಂ ಇಬ್ಬರೂ ದೆಹಲಿಗೆ ಹೋಗಿದ್ದಾರೆ. ಹೈಕಮಾಂಡ್ ಏನ್ ಹೇಳುತ್ತೋ ಗೊತ್ತಿಲ್ಲ. ಸಂಪುಟ ಸರ್ಜರಿ ಮಾಡಿ, ಅಧ್ಯಕ್ಷರಾಗಿ ನೀವೇ ಮುಂದುವರೆಯಿರಿ ಎನ್ನಬಹುದು.. ಅಥವಾ ಸಚಿವ ಸಂಪುಟ ಬದಲಾವಣೆ ಜೊತೆಗೆ, ಅಧ್ಯಕ್ಷರನ್ನೂ ಬದಲಾಯಿಸಿ ಬಿಡಬಹುದು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more