Feb 7, 2022, 9:36 PM IST
ಬೆಂಗಳೂರು, (ಫೆ.07): ವಿಧಾನ ಪರಿಷತ್ ವಿಪಕ್ಷ ನಾಯಕನ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಮುನಿಸಿಕೊಂಡಿರುವ ಇಬ್ರಾಹಿಂ ಕಾಂಗ್ರೆಸ್ ತೊರೆಯಲು ನಿರ್ಧರಿಸಿದ್ದು, ಶೀಘ್ರವೇ ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಸೇರಲು ತೀರ್ಮಾನಿಸಿದ್ದಾರೆ.
Karnataka Congress ಫೆ.14ರಂದು ಲವರ್ಸ್ ಡೇ, ಅಂದೇ ರಾಜೀನಾಮೆ ನೀಡ್ತೇನೆ, ಇಬ್ರಾಹಿಂ ಘೋಷಣೆ
ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾಹಿಂ ಅವರನ್ನು ಪಕ್ಷ ತೊರೆಯದಂತೆ ಮನವೊಲಿಕೆ ಮಾಡಲು ಸಿದ್ದರಾಮಯ್ಯ ಯತ್ನಿಸುತ್ತಿದ್ದಾರೆ. ಸಿದ್ದರಾಮಯ್ಯ ಸೂಚನೆ ಮೇರೆಗೆ ಎಚ್.ಸಿ.ಮಹದೇವಪ್ಪ ಅವರು ಇಬ್ರಾಹಿಂ ಜೊತೆ ಸಂಧಾನ ಮಾತುಕತೆ ನಡೆಸಿದರು.