ಶಿರಬಾಗಿ ನಮಸ್ಕರಿಸಿ ಬಸ್‌ ಹತ್ತಿದ ಅಜ್ಜಿ: ಬಹುಕಾಲ ನೆನಪಿನಲ್ಲಿ ಉಳಿಯುವಂತ ಫೋಟೋ ಎಂದ ಸಿಎಂ

ಶಿರಬಾಗಿ ನಮಸ್ಕರಿಸಿ ಬಸ್‌ ಹತ್ತಿದ ಅಜ್ಜಿ: ಬಹುಕಾಲ ನೆನಪಿನಲ್ಲಿ ಉಳಿಯುವಂತ ಫೋಟೋ ಎಂದ ಸಿಎಂ

Published : Jun 12, 2023, 11:03 AM IST

ಧಾರವಾಡದಲ್ಲಿ ಅಜ್ಜಿಯೊಬ್ಬರು ಬಸ್‌ಗೆ ಶಿರಬಾಗಿ ನಮಸ್ಕರಿಸಿರುವ ಫೋಟೋವನ್ನು ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.
 

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆ ಬಸ್‌ ಹತ್ತುವಾಗ ಧಾರವಾಡದಲ್ಲಿ ಅಜ್ಜಿಯೊಬ್ಬರು ಬಸ್‌ಗೆ ಶಿರಬಾಗಿ ನಮಸ್ಕರಿಸಿದ್ದಾರೆ. ಈ ಫೋಟೋವನ್ನು ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ. ಟ್ವೀಟ್‌ನಲ್ಲಿ ಅವರು ಹೀಗೆ ಬರೆದಿದ್ದಾರೆ. ನಾವು ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಘೋಷಿಸಿದಾಗ ಶ್ರಮಪಡದೆ ಸಮಾಜದ ಎಲ್ಲಾ ವಿಧದ ಸೌಲಭ್ಯಗಳನ್ನು ಕೂತಲ್ಲಿಯೇ ಅನುಭವಿಸುತ್ತಿರುವ ಜನರಿಂದ ತರತರನಾದ ಟೀಕೆಗಳು, ಕುಹಕ, ವ್ಯಂಗ್ಯಗಳು ವ್ಯಕ್ತವಾದವು. ಅದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಶಕ್ತಿ ಯೋಜನೆಯನ್ನು ಜಾರಿಗೆ ಕೊಟ್ಟೆವು. ನಮ್ಮ ಯೋಜನೆ ಜಾರಿಗೊಂಡ ನಂತರ ತಾಯಿಯೊಬ್ಬರು ಧಾರವಾಡ ಬಸ್ ನಿಲ್ದಾಣದಲ್ಲಿ ಬಸ್‌ಗೆ ನಮಸ್ಕರಿಸಿ ಅತ್ಯಂತ ಸಂತೋಷದಿಂದ ಉಚಿತ ಪ್ರಯಾಣ ಮಾಡಿದರು. ನಾವು ಎಷ್ಟು ಅನುದಾನ ಖರ್ಚು ಮಾಡುತ್ತೇವೆ ಎನ್ನುವುದಕ್ಕಿಂತ ಯಾರಿಗಾಗಿ ಆ ಹಣ ವಿನಿಯೋಗಿಸುತ್ತಿದ್ದೇವೆ ಎಂಬುದು ಮುಖ್ಯ. ಈ ಕ್ಷಣ ಇನ್ನೂ ನೂರು ವಿಧದಲ್ಲಿ ಟೀಕೆಗಳು ಎದುರಾದರೂ ಅದ್ಯಾವುದಕ್ಕೂ ಕುಗ್ಗದಂತೆ ನನ್ನನ್ನು ಗುರಿಯೆಡೆಗೆ ಮತ್ತಷ್ಟು ದೃಢವಾಗಿಸಿದೆ. ಯೋಜನೆ ಜಾರಿಗೆ ಕೊಟ್ಟ ಸಂತೃಪ್ತಿ ನನಗೆ ನೀಡಿದ ಜೊತೆಗೆ ಬಹುಕಾಲ ನೆನಪಿನಲ್ಲಿ ಉಳಿಯುವಂತ ಫೋಟೋ ಇದು ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ: ಬೈಕ್‌ ಸವಾರನ ಮೇಲೆ ದಾಳಿಗೆ ಮುಂದಾದ ಕರಡಿ: ಸ್ವಲ್ಪದರಲ್ಲೇ ಬಚಾವ್‌... ಅಬ್ಬಾ..! ಭಯಾನಕ ವಿಡಿಯೋ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more