ಸದನದಲ್ಲಿ ವಾಜಪೇಯಿ ಮಾತುಗಳನ್ನ ಪ್ರಸ್ತಾಪಿಸಿ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡ ಸಿದ್ದು

Sep 15, 2021, 3:34 PM IST

ಬೆಂಗಳೂರು, (ಸೆ.15): ವಿಧಾನಸಭೆ ಕಲಾಪದ ವೇಳೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿಚಾರ ಪ್ರತಿಧ್ವನಿಸಿದ್ದು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಪೆಟ್ರೋಲ್‌, ಡೀಸೆಲ್‌ನಿಂದ ಕೇಂದ್ರ ಸರ್ಕಾರ 24 ಲಕ್ಷ ಕೋಟಿ ರು. ಸುಲಿಗೆ

ವಿಧಾನಸಭೆಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಹಿಂದಿನ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿತ್ತು ? ಈಗ ಎಷ್ಟಿದೆ ಎಂಬ ವಿಚಾರವಾಗಿ ವಿಷಯ ಪ್ರಸ್ತಾಪಿಸಿದರು. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿ ಜನ ಸಾಮಾನ್ಯರು ಕಣ್ಣೀರಲ್ಲಿ ಕೈತೊಳೆಯುವ ಸ್ಥಿತಿ ಬಂದಿದೆ. ಹೀಗಾದರೆ ಜನರು ಜೀವನ ನಡೆಸುವುದಾದರೂ ಹೇಗೆ ? ಎಂಬುದನ್ನು ಸರ್ಕಾರ ವಿವರಿಸಬೇಕು. ಅಗತ್ಯ ವಸ್ತುಗಳ ಬೆಲೆಗಳನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು. ಅಲ್ಲದೇ ಇದೇ ವೇಳೆ ಈ ಹಿಂದೆ ಬೆಲೆ ಏರಿಕೆ ವಿಚಾರವಾಗಿ ವಾಜಪೇಯಿಯವರ ಮಾತುಗಳನ್ನ ಪ್ರಸ್ತಾಪಿಸಿದರು.