BBMP Elections: ಬಿಜೆಪಿ ಗೆಲುವಿನ ತಂತ್ರಕ್ಕೆ ತಿರುಮಂತ್ರ ಹಾಕಿದ ಕಾಂಗ್ರೆಸ್‌!

BBMP Elections: ಬಿಜೆಪಿ ಗೆಲುವಿನ ತಂತ್ರಕ್ಕೆ ತಿರುಮಂತ್ರ ಹಾಕಿದ ಕಾಂಗ್ರೆಸ್‌!

Published : Aug 05, 2023, 10:42 AM ISTUpdated : Aug 05, 2023, 10:43 AM IST

ಕಾಂಗ್ರೆಸ್‌ ಸರ್ಕಾರ ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆಯನ್ನು 225ಕ್ಕೆ ಇಳಿಸಿದೆ. ಇದು ಬಿಜೆಪಿ ಅವಧಿಯಲ್ಲಿ 243ಕ್ಕೆ ಏರಿಕೆಯಾಗಿತ್ತು.
 

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ರಾಜ್ಯ ಸರ್ಕಾರ ಸಜ್ಜಾಗಿದ್ದು, ವಾರ್ಡ್‌ಗಳ ಸಂಖ್ಯೆಯನ್ನು 225ಕ್ಕೆ ಇಳಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಹೈಕೋರ್ಟ್(Highcourt) ನಿರ್ದೇಶನದ ಮೇರೆಗೆ ಬಿಬಿಎಂಪಿ ಆಯುಕ್ತರ ನೇತೃತ್ವದಲ್ಲಿ ಡಿಲಿಮಿಟೇಷನ್ ಸಮಿತಿ ರಚಿಸಿತ್ತು. ಜನಸಂಖ್ಯೆ ಆಧಾರದ ಮೇಲೆ 243 ವಾರ್ಡ್(Wards) ನಿಗಿಪಡಿಸುವುದು ಸೂಕ್ತ ಎಂದು ಸಮಿತಿ ವರದಿ ನೀಡಿತ್ತು. ಸಮಿತಿ ವರದಿ ಬಳಿಕ ಸರ್ಕಾರ 243 ವಾರ್ಡ್‌ಗಳನ್ನು 225ಕ್ಕೆ ಇಳಿಸಿ ಆದೇಶ ಹೊರಡಿಸಿದೆ. 2020ರಲ್ಲಿ ಬಿಬಿಎಂಪಿ(BBMP) ಸದಸ್ಯರ ಅಧಿಕಾರಾವಧಿ ಮುಗಿದಿದ್ದು, ಚುನಾವಣೆ ನಡೆಸುವ ದೃಷ್ಟಿಯಿಂದ 198 ವಾರ್ಡ್‌ಗಳಾಗಿ ಪುನರ್ ವಿಂಗಡಣೆ ಮಾಡಲಾಗಿತ್ತು. ಹಿಂದೆ ಬಿಜೆಪಿ(BJP) ಸರ್ಕಾರ 243 ವಾರ್ಡ್‌ಗಳಿಗೆ ಏರಿಕೆ ಮಾಡಿತ್ತು. ಬಿಜೆಪಿ ಮಾಡಿರೋ ವಾರ್ಡ್ ವಿಂಗಡಣೆ ಸೂಕ್ತವಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಕೋರ್ಟ್‌ ಮೊರೆ ಹೋಗಿತ್ತು. ಇದೀಗ ಕಾಂಗ್ರೆಸ್‌(Congress) ವಾರ್ಡ್‌ಗಳನ್ನು ಮರುವಿಂಗಡಣೆ ಮಾಡಿದೆ. 15 ವಾರ್ಡ್‌ಗಳನ್ನು ಕಡಿಮೆ ಮಾಡಲು ಕಾಂಗ್ರೆಸ್‌ ತೀರ್ಮಾನಿಸಿದೆ.

ಇದನ್ನೂ ವೀಕ್ಷಿಸಿ:  ಅಯೋಗ್ಯ ಸಕ್ಸಸ್ ಜೋಡಿಯ ಮ್ಯಾಟ್ನಿ: ಸಂಜೆ ಮೇಲೆ ಸುಮ್ನೇ ಹಂಗೆ ಫೋನ್‌ ಮಾಡ್ಲಾ ಅಂತಿದ್ದಾರೆ ಸತೀಶ್‌

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!