ಯತೀಂದ್ರ ಸಿದ್ದರಾಮಯ್ಯ ಸ್ಥಾನಮಾನ ಕೇಳಿದ್ದರ ಕಾರಣ ಬಹಿರಂಗ: ಸಣ್ಣ ಹುದ್ದೆಯಾದ್ರೂ ಕೊಡಿ

Jul 5, 2023, 11:51 PM IST

ಮೈಸೂರು (ಜು.05):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಕಳೆದ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಆದರೆ, ಈ ಬಾರಿ ತಂದೆಗೆ ಕ್ಷೇತ್ರವನ್ನು ಬಿಟ್ಟುಕೊಟ್ಟು ಯಾವುದೇ ಸ್ಥಾನಮಾನವಿಲ್ಲದೇ ಸಾಮಾನ್ಯ ಜನರಂತಾಗಿದ್ದಾರೆ. ಎಲ್ಲದಕ್ಕೂ ಅಪ್ಪನ ಹೆಸರು ಬಳಸುವ ಬದಲು ತನಗೆ ಒಂದು ಚಿಕ್ಕ ಸ್ಥಾನಮಾನವಾದರೂ ಬೇಕು ಎಂದು ಮುಖ್ಯಮಂತ್ರಿ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ವರುಣ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಹೆಚ್ಚು ಸಮಯ ಕೊಡಲಾಗದ ಹಿನ್ನೆಲೆಯಲ್ಲಿ ಸರ್ಕಾರಿ ಸ್ಥಾನಮಾನದ ನಿರೀಕ್ಷೆಯಲ್ಲಿ ಸಿಎಂ ಪುತ್ರ ಡಾ ಯತಿಂದ್ರ ಇದ್ದಾರೆ. ಕ್ಷೇತ್ರದಲ್ಲಿ ತಂದೆಯ ಜವಾಬ್ದಾರಿ ನಿಭಾಯಿಸಲು ಡಾ ಯತಿಂದ್ರ ಒಲವು ತೋರಿಸಿದ್ದಾರೆ. ಕಳೆದ ಬಾರಿಯಂತೆ ಸಣ್ಣ ಹುದ್ದೆ ನೀಡಿದರೂ ನಿಭಾಯಿಸುತ್ತೇನೆ. ತಂದೆಯವರು ಸಿಎಂ ಆಗಿರುವ ಕಾರಣ ಕ್ಷೇತ್ರದ ಜನರಿಗೆ ಹೆಚ್ಚು ಸಮಯ ಕೊಡಲಾಗುತ್ತಿಲ್ಲ. ಅವರನ್ನ ನೋಡಲು ಬರುವ ರಾಜ್ಯದ ಜನರನನ್ನೆಲ್ಲ ಭೇಟಿಯಾಗಬೇಕು. ಆದ್ದರಿಂದ ವರುಣ ಕ್ಷೇತ್ರದ ಮತದಾರರಿಗೆ ಹೆಚ್ಚು ಸಮಯ ಕೊಡಲಾಗುತ್ತಿಲ್ಲ ಎಂದು ಹೇಳಿದ್ದಾರೆ. 

ಅಧಿಕಾರಿಗಳಿಗೆ ಹೇಳಲು ಸ್ಥಾನಮಾನ ಬೇಕು:  ಸ್ಥಳೀಯ ಅಧಿಕಾರಿಗಳೊಂದಿಗೆ ಜನರ ಸಮಸ್ಯೆಯನ್ನ ಅಧಿಕಾರಿಗಳೊಂದಿಗೆ ಚರ್ಚಿಸಬೇಕು. ಅಧಿಕಾರಿಗಳಿಗೆ ಹೇಳಿ ಜನರ ಸಣ್ಣ ಪುಟ್ಟ ಸಮಸ್ಯೆ ಬಗೆಹರಿಸಲು ಸರ್ಕಾರಿ ಸ್ಥಾನಮಾನ ಇರಬೇಕು. ನನಗೆ ಯಾವುದಾದರು  ಚಿಕ್ಕದಾದ ಸ್ಥಾನಮಾನ ನೀಡಿದ್ರು ಸಹಕಾರಿ ಆಗುತ್ತದೆ. ಕಳೆದ ಬಾರಿ ಆಶ್ರಯ ಸಮಿತಿಯ ಅಧ್ಯಕ್ಷ ಸ್ಥಾನ ನೀಡಿದ್ದರು. ಅದು ದೊಡ್ಡ ಹುದ್ದೆಯಲ್ಲ, ಆದರೂ ಅಂತದ್ದೆ ಸಣ್ಣ ಹುದ್ದೆ ನೀಡಿದ್ರು ಜನರ ಸೇವೆ ಮಾಡಲು ನಾನು ಸಿದ್ದನಿದ್ದೇನೆ ಎಮದು ಮೈಸೂರಿನಲ್ಲಿ ಸಿಎಂ ಪುತ್ರ ಡಾ ಯತಿಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.