National Flag Row: ಸಚಿವ ಈಶ್ವರಪ್ಪ ಬೆನ್ನಿಗೆ ನಿಂತ ರೇಣುಕಾಚಾರ್ಯ

Feb 20, 2022, 4:01 PM IST

ದಾವಣಗೆರೆ, (ಫೆ.20) ಸಚಿವ ಕೆ.ಎಸ್. ಈಶ್ವರಪ್ಪ(KS Eshwarappa) ಅವರ ಕೆಂಪುಕೋಟೆ ಮೇಲೆ ಕೇಸರಿ ಧ್ವಜ (Kesari Flag) ಹಾರಿಸುವ  ಹೇಳಿಕೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ.

ತೀವ್ರ ಸ್ವರೂಪ ಪಡೆದುಕೊಂಡ ಈಶ್ವರಪ್ಪ ಮಾತು,ಅತ್ತ ಹೋರಾಟಕ್ಕೆ ಕಾಂಗ್ರೆಸ್ ಕರೆ, ಇತ್ತ ಬಿಜೆಪಿ ತುರ್ತು ಸಭೆ

ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್​ ಧರಣಿ ನಡೆಸುತ್ತಿದೆ. ವಿಧಾನಸೌಧ ಹಾಗೂ ವಿಧಾನ ಪರಿಷತ್​ನಲ್ಲಿ ಈಶ್ವರಪ್ಪ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಮಧ್ಯೆ, ವಿಧಾನಸೌಧದ ಹೊರಗೂ ಹೋರಾಟಕ್ಕೆ ಕಾಂಗ್ರೆಸ್ ನಾಯಕರು (Congress Peotest) ಕರೆ ನೀಡಿದ್ದಾರೆ. ನಾಳೆ (ಫೆಬ್ರವರಿ 21) ರಾಜ್ಯಾದ್ಯಂತ ಈಶ್ವರಪ್ಪ (KS Eshwarappa) ವಿರುದ್ಧ ಪ್ರತಿಭಟನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಕರೆ ನೀಡಿದ್ದಾರೆ. 

ಇನ್ನು ಈ ಬಗ್ಗೆ ಬಿಜೆಪಿ ಶಾಸಕ ರೇಣುಕಾಚಾರ್ಯ ಪ್ರತಿಕ್ರಿಯಿಸಿದ್ದು, ಈಶ್ವರಪ್ಪ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ಕ್ಷಮೆನೂ ಕೇಳಲ್ಲ. ಯಾಕೆ ಕ್ಷಮೆ ಕೇಳಬೇಕೆಂದು ಈಶ್ಚರಪ್ಪ ಪರ ಬ್ಯಾಟಿಂಗ್ ಮಾಡಿದ್ದಾರೆ.