Dec 20, 2022, 6:24 PM IST
ರಾಯಚೂರು (ಡಿ.20): ರಾಯಚೂರು ಜಿಲ್ಲೆ ಕಾಂಗ್ರೆಸ್ ಭದ್ರಕೋಟೆ ಎಂದು ಹೇಳಲಾಗುತ್ತಿದ್ದರೂ, ಕಳೆದ ಎರಡು ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಶಾಸಕ ಸ್ಥಾನಗಳನ್ನು ಕಿತ್ತುಕೊಳ್ಳುತ್ತಾ ಬಂದಿದೆ. ಆದರೆ, ನಿಖರವಾಗಿ ರಾಯಚೂರು ಜಿಲ್ಲೆಯನ್ನು ಒಂದು ಪಕ್ಷದ ಪ್ರಾಭಲ್ಯ ಇದೆ ಎಂದು ಹೇಳಲಿಕ್ಕೆ ಸಾಧ್ಯವಿಲ್ಲದಂತಾಗಿದೆ. ಇನ್ನು ರಾಯಚೂರಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಟಿಕೆಟ್‌ಗೆ ತೀವ್ರ ಕದನ ಶುರುವಾಗಿದೆ. ಇನ್ನು ಈ ಹಿಂದೆ ನಡೆದಿದ್ದ ಚುನಾವಣೆಯಲ್ಲಿ ಜಿಲ್ಲೆಯ 7 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 3, ಬಿಜೆಪಿ ಮತ್ತು ಜೆಡಿಎಸ್ ತಲಾ 2 ಸ್ಥಾನಗಳನ್ನು ಪಡೆದುಕೊಂಡಿದೆ. ಈಗ 2023ರ ವಿಧಾನಸಭಾ ಚುನಾವಣೆ ಆರಂಭವಾಗುತ್ತಿದ್ದಂತೆ ಟಿಕೆಟ್ ಫೈಟ್ ಕೂಡ ಜೋರಾಗಿ ನಡೆಯುತ್ತಿದೆ. ರಾಯಚೂರು ನಗರ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಬೇಕೆಂಬ ಒತ್ತಡ ಹೆಚ್ಚಾಗಿದೆ. ಒಟ್ಟಾರೆ ಕಾಂಗ್ರೆಸ್ ಟಿಕೆಟ್‌ಗೆ 17 ಜನರು ಟಿಕೆಟ್ ಪಡೆಯಲು ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ದೇವದುರ್ಗದಲ್ಲಿ ಮೂರೂ ಪಕ್ಷಗಳ ನಾಯಕರ ಕಾದಾಟ ಇರಲಿದೆ. ಮಾನ್ವಿ ಕ್ಷೇತ್ರದಲ್ಲಿ ಜೆಡಿಎಸ್ ವಿರುದ್ಧ ಪ್ರಭಲ ಆಕಾಂಕ್ಷಿಗಳ ಕೊರತೆ ಎದುರಾಗಿದೆ. ರಾಜಾ ವೆಂಕಟಪ್ಪನಾಯಕ ಜೆಡಿಎಸ್ ಅಭ್ಯರ್ಥಿ ಆಗಿದ್ದಾರೆ. ಎಲ್ಲ ಕ್ಷೇತ್ರಗಳ ಆಕಾಂಕ್ಷಿಗಳ ವಿವರಕ್ಕಾಗಿ ಈ ವಿಡಿಯೋ ನೋಡಿ...