ಭಾರತಕ್ಕೆ ಅಮೆರಿಕದ ನೆರವು ರದ್ದು: ಟ್ರಂಪ್ ಹೇಳಿಕೆಗೆ ಕಾರಣವೇನು? Trump | India US relations | Suvarna News

Published : Feb 22, 2025, 06:00 PM IST

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಮತದಾರರ ಸಂಖ್ಯೆ ಹೆಚ್ಚಿಸಲು ನೀಡುತ್ತಿದ್ದ 21 ಮಿಲಿಯನ್ ಡಾಲರ್ ಫಂಡನ್ನು ರದ್ದುಗೊಳಿಸಿದ್ದು, ಅಮೆರಿಕನ್ನರ ತೆರಿಗೆ ಹಣವನ್ನು ಭಾರತಕ್ಕೆ ಏಕೆ ನೀಡಬೇಕು ಎಂದು ಪ್ರಶ್ನಿಸಿದ್ದಾರೆ. ಭಾರತದ ಬಳಿ ಸಾಕಷ್ಟು ಹಣವಿದ್ದು, ಜಗತ್ತಿನಲ್ಲಿಯೇ ಅತಿ ಹೆಚ್ಚು ತೆರಿಗೆ ವಸೂಲಿ ಮಾಡುವ ದೇಶಗಳಲ್ಲಿ ಒಂದಾಗಿದೆ ಎಂದು ಟ್ರಂಪ್ ವಾದಿಸಿದ್ದಾರೆ. ಆದರೂ ಭಾರತದ ಜನ ಮತ್ತು ಪ್ರಧಾನಿ ಎಂದರೆ ತನಗೆ ಗೌರವವಿದೆ ಎಂದು ಹೇಳಿದ್ದಾರೆ. ಟ್ರಂಪ್ ಅವರ ಈ ಹೇಳಿಕೆ ಹೊಸ ಚರ್ಚೆಗೆ ಗ್ರಾಸವಾಗಿದ್ದು, ಭಾರತವು 2027ರ ವೇಳೆಗೆ ಜರ್ಮನಿಯನ್ನು ಹಿಂದಿಕ್ಕಿ ನಾಲ್ಕನೇ ಅತಿದೊಡ್ಡ ಆರ್ಥಿಕ ವ್ಯವಸ್ಥೆಯಾಗುವ ಮತ್ತು 2050ರ ವೇಳೆಗೆ ಅಮೆರಿಕಾ ಮತ್ತು ಚೀನಾಗಳ ನಂತರ ಅತ್ಯಂತ ಶ್ರೀಮಂತ ದೇಶವಾಗುವ ಸಾಧ್ಯತೆ ಇದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಯುವ ಜನಸಂಖ್ಯೆ, ತಂತ್ರಜ್ಞಾನದಲ್ಲಿನ ಪ್ರಗತಿ, ಮೇಕ್ ಇನ್ ಇಂಡಿಯಾ, ಸ್ಟಾರ್ಟಪ್ ಯೋಜನೆಗಳು ಮತ್ತು ಹೆಚ್ಚುತ್ತಿರುವ ರಫ್ತು ಭಾರತದ ಆರ್ಥಿಕ ಬೆಳವಣಿಗೆಗೆ ಕಾರಣವಾಗುತ್ತಿವೆ. ಆದಾಗ್ಯೂ, ಆದಾಯದಲ್ಲಿನ ಅಸಮಾನತೆ, ಕುಸಿಯುತ್ತಿರುವ ರೂಪಾಯಿ ಮೌಲ್ಯ ಮತ್ತು ಉದ್ಯೋಗಗಳ ಕೊರತೆ ಭಾರತಕ್ಕೆ ಸವಾಲುಗಳಾಗಿವೆ. ಅಮೆರಿಕದ ಉತ್ಪನ್ನಗಳ ಮೇಲೆ ಭಾರತ ವಿಧಿಸುವ ಅಧಿಕ ತೆರಿಗೆಗಳ ಬಗ್ಗೆ ಟ್ರಂಪ್ ಈ ಹಿಂದೆ ಹಲವು ಬಾರಿ ಟೀಕಿಸಿದ್ದರು. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more