Nov 14, 2023, 11:08 PM IST
ಬಿವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ ಕೆಲ ನಾಯಕರು ಮುನಿಸಿಕೊಂಡಿದ್ದಾರೆ. ಈ ಪೈಕಿ ವಿ ಸೋಮಣ್ಣ ಒಬ್ಬರು. ವಿಧಾನಸಭಾ ಚುನಾವಣೆ ಸೋಲಿನ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಸೋಮಣ್ಣಗೆ ಇದೀಗ ಸ್ಥಾನ ತಪ್ಪಿದೆ. ಇತ್ತ ಸೋಮಣ್ಣ ವಿರೋಧಿಸುತ್ತಲೇ ಬಂದಿದ್ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ಸಿಕ್ಕಿರುವುದು ಮತ್ತಷ್ಟು ಕಂಗಾಲು ಮಾಡಿದೆ. ಇದೀಗ ಸೋಮಣ್ಣ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಡಿಸೆಂಬರ್ 6ರಂದು ತುಮಕೂರಿನಲ್ಲಿ ಸೋಮಣ್ಣ ರಾಜಕೀಯ ಶಕ್ತಿ ಪ್ರದರ್ಶನ ಮಾಡಿ ಹೈಕಮಾಂಡ್‌ಗಂ ಸಂದೇಶ ರವಾನಿಸಲು ಸಜ್ಜಾಗಿದ್ದಾರೆ.