ದಾವಣಗೆರೆಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮೂಡಾ ಹಗರಣದಲ್ಲಿ ಸಿಎಂಗೆ ಕ್ಲೀನ್ ಚಿಟ್ ಸಿಕ್ಕಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಷಡ್ಯಂತ್ರದಿಂದ ಕೇಸ್ ದಾಖಲಾಗಿತ್ತು ಎಂದು ಟೀಕಿಸಿದ್ದಾರೆ. ಬಿಜೆಪಿ ಅವಧಿಯಲ್ಲಿ ಆರಂಭವಾದ ವಿಶ್ವವಿದ್ಯಾಲಯಗಳಿಗೆ ಅನುದಾನ ನೀಡದ ವಿಚಾರವನ್ನೂ ಪ್ರಶ್ನಿಸಿದ್ದಾರೆ. ಗೃಹಲಕ್ಷ್ಮಿ ಹಣದ ಬಗ್ಗೆ ಮಾತನಾಡುವವರು, ಕೇಂದ್ರದ ಯೋಜನೆಗಳ ಬಗ್ಗೆ ಚರ್ಚಿಸುವುದಿಲ್ಲ ಎಂದು ದೂರಿದ್ದಾರೆ. ಮೇಕ್ ಇನ್ ಇಂಡಿಯಾ ಯೋಜನೆಯನ್ನು ಟೀಕಿಸಿ, ಪ್ರಧಾನಿ ಎಲ್ಲವನ್ನೂ ತಾವೇ ಆಗಲು ಹೊರಟಿದ್ದಾರೆ ಎಂದು ಆರೋಪಿಸಿದ್ದಾರೆ. ನಿತಿನ್ ಗಡ್ಕರಿ ಪ್ರಧಾನಿಯಾದರೆ ದೇಶಕ್ಕೆ ಒಳ್ಳೆಯದಾಗುತ್ತದೆ ಎಂದು ಹೇಳಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared