ಮೋದಿ, ಶಾ ಯಾರೇ ಬರಲಿ,  ಕೋಲಾರದಲ್ಲಿ ಗೆಲವು ನನ್ನದೇ: ಸಿದ್ದರಾಮಯ್ಯ ಗುಟುರು

ಮೋದಿ, ಶಾ ಯಾರೇ ಬರಲಿ, ಕೋಲಾರದಲ್ಲಿ ಗೆಲವು ನನ್ನದೇ: ಸಿದ್ದರಾಮಯ್ಯ ಗುಟುರು

Published : Jan 21, 2023, 04:43 PM IST

ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಯಾರೇ ಬಂದು, ಏನೇ ಮಾಡಿದರೂ‌ ನಾನು ಗೆಲ್ಲುತ್ತೇನೆ. ಬದಾಮಿಯಲ್ಲೂ ನನ್ನನ್ನು ಸೋಲಿಸಲು ಅಮಿತ್ ಶಾ ಬಂದಿದ್ದರು. ಅಶೋಕ್ ಪಟ್ಟಣಶೆಟ್ಟಿ ಬದಲು ಶ್ರೀ ರಾಮುಲು ನಿಲ್ಲಿಸಿದರು. ಆದರೂ ನನ್ನನ್ನು ಸೋಲಿಸಲು ಸಾಧ್ಯವಾಗಲಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಗುಟುರು ಹಾಕಿದ್ದಾರೆ.

ಮೈಸೂರು (ಜ.21): ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಯಾರೇ ಬಂದು, ಏನೇ ಮಾಡಿದರೂ‌ ನಾನು ಗೆಲ್ಲುತ್ತೇನೆ. ಬದಾಮಿಯಲ್ಲೂ ನನ್ನನ್ನು ಸೋಲಿಸಲು ಅಮಿತ್ ಶಾ ಬಂದಿದ್ದರು. ಅಶೋಕ್ ಪಟ್ಟಣಶೆಟ್ಟಿ ಬದಲು ಶ್ರೀ ರಾಮುಲು ನಿಲ್ಲಿಸಿದರು. ಆದರೂ ನನ್ನನ್ನು ಸೋಲಿಸಲು ಸಾಧ್ಯವಾಗಲಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಗುಟುರು ಹಾಕಿದ್ದಾರೆ.

ನಾನು ಅಲ್ಲಿ ಪ್ರಚಾರಕ್ಕೆ ಹೋಗಿದ್ದು ಎರಡೇ ದಿನ. ನಾನು ಬದಾಮಿ ಕ್ಷೇತ್ರ ಬದಲಾಯಿಸಿದ್ದು ದೂರ ಅನ್ನೋ ಕಾರಣಕ್ಕೆ. ನಾನು ಅಲ್ಲಿ ನಿಂತರೆ ಸೋಲುತ್ತೀನಿ ಅಂತಾ ಅಲ್ಲ.  ಬದಾಮಿ ಜನ ಹೆಲಿಕ್ಯಾಪ್ಟರ್ ಕೊಡಿಸುತ್ತೇವೆ ಅಂದರು. ನಾನೇ ಬೇಡ ಎಂದು ಕೋಲಾರದಿಂದ ಸ್ಪರ್ಧೆ ಮಾಡಲು ಸಿದ್ಧವಾಗಿದ್ದೇನೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಕ್ಷೇತ್ರ ಹತ್ತಿರವಾಗುತ್ತದೆ ಎನ್ನುವ ದೃಷ್ಟಿಯಿಂದ ಕೋಲಾರದಲ್ಲಿ ಸ್ಪರ್ಧೆ ಮಾಡುತ್ತಿದ್ದೇನೆ. ಮುಂದಿನ ಚುನಾವಣೆಯಲ್ಲಿ ನಾವು 130 ಸ್ಥಾನ ಗೆಲ್ಲುತ್ತೇವೆ. ಅದು 150 ಆದರೂ ಆಗಬಹುದು ಎಂದು ತಿಳಿಸಿದರು. 

ಕೋಲಾರದಲ್ಲಿ ಸಿದ್ದುಗಾಗಿ ಮನೆ ಹುಡುಕಾಟ: ಇತ್ತ ಟಗರು ಬೇಟೆಗೆ ಕೇಸರಿ ಖೆಡ್ಡಾ

ರಾಜ್ಯದ ಜನ ಕಾಂಗ್ರೆಸ್ ಅಧಿಕಾರದಲ್ಲಿ ಆಗಿದ್ದ ಕೆಲಸಗಳ ಬಗ್ಗೆ ತಿಳಿದುಕೊಂಡಿದ್ದಾರೆ. ನಾವು ಹಿಂದೆ ಪ್ರಣಾಳಿಕೆಯಲ್ಲಿ ಹೇಳಿದ್ದ ಶೇಕಡ 99 ರಷ್ಟು ಕೆಲಸ ಮಾಡಿದ್ದೇವೆ. ಈಗಲೂ 200 ಯುನಿಟ್ ಉಚಿತ ವಿದ್ಯುತ್, ಕುಟುಂಬ ಮುಖ್ಯಸ್ಥೆಗೆ ತಿಂಗಳು 2 ಸಾವಿರ ಹಣ ನೀಡುವುದಾಗಿ ಘೊಷಣೆ ಮಾಡಿದ್ದೇವೆ. ಇನ್ನೂ ಹಲವು ಘೋಷಣೆ ಮಾಡಲಿದ್ದೇವೆ. ಇವುಗಳು ಚುನಾವಣೆಯಲ್ಲಿ ನಮ್ಮ ಕೈ ಹಿಡಿಯುತ್ತವೆ. ಯಾರು ಏನೇ ಹೇಳಿದರೂ ಕಾಂಗ್ರೆಸ್ ಅಧಿಕಾರ ಹಿಡಿಯುವುದು ಸತ್ಯ ಎಂದರು.

ಮೋದಿ ಸರ್ಟಿಫಿಕೇಟ್‌ ಅನಗತ್ಯ:
ರಾಜ್ಯ ಸರ್ಕಾರಕ್ಕೆ ಪ್ರಧಾನಿ ಮೋದಿ ಸರ್ಟಿಫಿಕೇಟ್ ಅನಗತ್ಯ. ರಾಜ್ಯದಲ್ಲಿ ಪಿಎಸ್‌ಐ ಹಗರಣ ನಡೆದಿರುವುದು ಸುಳ್ಳಾ ? ಎಡಿಜಿಪಿ ಜೈಲು ಸೇರಿರುವುದು ಸುಳ್ಳಾ ? ಏನು ಆಗಿಲ್ಲ ಅಂದರೆ ಆತ ಇನ್ನು ಏಕೆ ಜೈಲಿನಲ್ಲಿದ್ದಾನೆ ? ಮೈಸೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು. ರಾಜ್ಯಕ್ಕೆ ಪದೇ ಪದೇ ಬಿಜೆಪಿ ಕೇಂದ್ರ ನಾಯಕರ ಭೇಟಿ. ಯಾರು ಬಂದರೂ ಏನು ಪ್ರಯೋಜನ ಇಲ್ಲ. ನಡ್ಡಾಗೂ ರಾಜ್ಯಕ್ಕೂ ಏನು ಸಂಬಂಧ. ಅವರು ಏಕೆ ರಾಜ್ಯಕ್ಕೆ ಬರುತ್ತಿದ್ದಾರೆ? ಎಂದು ಪ್ರಶ್ನೆ ಮಾಡಿದರು. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more